ರೈತರ ಪ್ರತಿಭಟನೆ 
ರಾಜ್ಯ

ನಮ್ಮನ್ನು ಅವಿವೇಕಿ ಎನ್ನಲು ಬಿ.ಸಿ. ಪಾಟೀಲ್ ಯಾರು?; ರಾಜಧಾನಿಯಲ್ಲಿ ಭುಗಿಲೆದ್ದ ರೈತರ ಆಕ್ರೋಶ

ಭೂಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ, ವಿದ್ಯುತ್ ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆ ವಿರೋಧಿಸಿ ರೈತರು ರಾಜಧಾನಿಯಲ್ಲಿ ಬೀದಿಗಿಳಿದಿದ್ದು, ಸಾವಿರಾರು ಸಂಖ್ಯೆಯಲ್ಲಿ ರೈತರು ನಗರಕ್ಕೆ ಆಗಮಿಸಿ, ಸರ್ಕಾರದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಭೂಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ, ವಿದ್ಯುತ್ ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆ ವಿರೋಧಿಸಿ ರೈತರು ರಾಜಧಾನಿಯಲ್ಲಿ ಬೀದಿಗಿಳಿದಿದ್ದು, ಸಾವಿರಾರು ಸಂಖ್ಯೆಯಲ್ಲಿ ರೈತರು ನಗರಕ್ಕೆ ಆಗಮಿಸಿ, ಸರ್ಕಾರದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಮೆರವಣಿಗೆ ನಡೆಸಿದ ರೈತರು ಅಲ್ಲಿ ಸಮಾವೇಶಗೊಂಡಿದ್ದು, ಸಾಮಾಜಿಕ ಕಾರ್ಯಕರ್ತ ಯೋಗೇಂದ್ರ ಯಾದವ್ ಕೂಡ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ, ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಈ ವೇಳೆ ಮಾತನಾಡಿದ ಯೋಗೇಂದ್ರ ಯಾದವ್, ಕರ್ನಾಟಕ ವಿಧಾನಸಭೆ ಭೂ ಸುಧಾರಣೆ ಕಾನೂನು ತಿದ್ದುಪಡಿ ಮಾಡಲು ಹೊರಟಿದೆ, ಆದರೆ ಇದು ಭೂ ಸುಧಾರಣೆಗಾಗಿ ಮಾಡುತ್ತಿರುವ ತಿದ್ದುಪಡಿಯಲ್ಲ, ಬದಲಾಗಿ ಭೂಮಿಯನ್ನು ನಾಶಪಡಿಸಲು ಮಾಡುತ್ತಿರುವ ತಿದ್ದುಪಡಿ. ರೈತರು ಇಡೀ ದೇಶದಲ್ಲಿ ಎದ್ದು ನಿಂತಿದ್ದಾರೆ ಎಂದು ಹೇಳಿದರು.

ಈ ವೇಳೆ ಮಾತನಾಡಿದ ರೈತ ಮಹಿಳೆ ಮಂಜುಳಾ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.
ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಹರಿಹಾಯ್ದ ಅವರು, ಬಿ.ಸಿ.ಪಾಟೀಲ್ ಅವಿವೇಕಿ, ನಮ್ಮನ್ನು ಅವಿವೇಕಿಯನ್ನಲು ಆತ ಯಾರು ಎಂದು ಕಿಡಿಕಾರಿದರು.

ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ಕೊರೊನಾ ಹೆಸರಿನಲ್ಲಿ ಜನರನ್ನು ಮೌನವಾಗಿಸಿ ತಮಗೆ ಬೇಕಾದ ರೀತಿಯಲ್ಲಿ ಕಾಯ್ದೆಗಳನ್ನು ತಿದ್ದುಪಡಿ ತರಲು ನರೇಂದ್ರ ಮೋದಿ ಮುಂದಾಗಿದ್ದಾರೆ. ಆದರೆ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

ರೈತ ಮುಖಂಡರಾದ ಕುರುಬೂರು ಶಾಂತಕುಮಾರ್, ಕೋಡಿಹಳ್ಳಿ ಚಂದ್ರಶೇಖರ್ ಮೊದಲಾದವರು ಈ ಪ್ರತಿಭಟನೆಯ ನೇತೃತ್ವ ವಹಿಸಿದ್ದಾರೆ. ಮುಂಜಾನೆಯೇ ಸಾವಿರಾರು ರೈತರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಬಂದಿಳಿದ ರೈತರು ಆನಂದ್ ರಾವ್ ವೃತ್ತದವರೆಗೆ ಜಾಥಾ ನಡೆಸಿದರು. ಭದ್ರತೆಗಾಗಿ 500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

ಫ್ರೀಡಂ ಪಾರ್ಕ್ ನಲ್ಲಿ ರೈತರೊಬ್ಬರು ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ಕಳುಹಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ: ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಜಾತಿ ನಿಂದನೆ ತಂದೆ-ಮಗನ ವಿರುದ್ಧ ಪ್ರಕರಣ ದಾಖಲು

SCROLL FOR NEXT