ವಾಟಾಳ್ ಪ್ರತಿಭಟನೆ 
ರಾಜ್ಯ

ಪೊಲೀಸರ ಕಣ್ತಪ್ಪಿಸಿ ಬಸ್ಸಿನಲ್ಲಿ ಸುವರ್ಣಸೌಧಕ್ಕೆ ಬಂದ ವಾಟಾಳ್ ನಾಗರಾಜ್ !

ಬೆಳಗಾವಿಯ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಸಬೇಕೆಂದು ಆಗ್ರಹಿಸಿ ಹೋರಾಟ ನಡೆಸಲು ಕೆಎಸ್ ಆರ್ ಟಿ ಸಿ ಬಸ್ಸಿನಲ್ಲಿ ಪೊಲೀಸರ ಕಣ್ತಪ್ಪಿಸಿ ಬೆಳಗಾವಿ ಸುವರ್ಣ ಸೌಧಕ್ಕೆ ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆಗಮಿಸಿ ಪ್ರತಿಭಟನೆ ನಡೆಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಸಬೇಕೆಂದು ಆಗ್ರಹಿಸಿ ಹೋರಾಟ ನಡೆಸಲು ಕೆಎಸ್ ಆರ್ ಟಿ ಸಿ ಬಸ್ಸಿನಲ್ಲಿ ಪೊಲೀಸರ ಕಣ್ತಪ್ಪಿಸಿ ಬೆಳಗಾವಿ ಸುವರ್ಣ ಸೌಧಕ್ಕೆ ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆಗಮಿಸಿ ಪ್ರತಿಭಟನೆ ನಡೆಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ವೇಳೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ವಾಟಾಳ್ ನಾಗರಾಜ್, ಸರ್ಕಾರ ಕೊರೋನಾ ನಿಯಂತ್ರಿಸುವಲ್ಲಿ ವಿಫಲವಾಗಿದೆ. ಜನರು ಸೋಂಕಿಗೆ ಬಲಿಯಾಗುತ್ತಿದ್ದರೂ ಸರ್ಕಾರ ಸುಮ್ಮನಿದೆ. ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಚರ್ಚಿಸಲು ಬೆಳಗಾವಿಯ ಸುವರ್ಣ ಸೌಧದಲ್ಲಿ ಅಧಿವೇಶನ ಕರೆಯಬೇಕು ಎಂದು ಆಗ್ರಹಿಸಿದರು.

ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಸುವರ್ಣಸೌಧ ನಿರ್ಮಾಣದ ಉದ್ದೇಶ ಏನು? ಕಳೆದ ಎರಡು ವರ್ಷಗಳಿಂದ ಸುವರ್ಣಸೌಧದಲ್ಲಿ ಸಭೆ ನಡೆಸಿಲ್ಲ. ಉತ್ತರ ಕರ್ನಾಟಕ ಭಾಗವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಮಳೆ, ಅತಿವೃಷ್ಟಿಯಿಂದ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ತತ್ತರಿಸಿವೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕಕ್ಕೆ ಅನುದಾನ ಸೇರಿದಂತೆ ಹಲವು ವಿಷಯಗಳಲ್ಲಿ ಅನ್ಯಾಯವಾಗಿದೆ. ನೆರೆ ಪರಿಹಾರವನ್ನು ಸಮರ್ಪಕವಾಗಿ ನೀಡಿಲ್ಲ ಎಂದು ವಾಟಾಳ್ ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!