ರಾಜ್ಯ

ವಿವಾದಿತ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಮಂಡನೆ: ಸರ್ಕಾರದ ವಿರುದ್ಧ ಹರಿಹಾಯ್ದ ವಿಪಕ್ಷಗಳು

Manjula VN

ಬೆಂಗಳೂರು: ರೈತರ ಮತ್ತು ಪ್ರತಿಪಕ್ಷಗಳ ತೀವ್ರ ವಿರೋಧಕ್ಕೆ ಎಡೆಮಾಡಿಕೊಟ್ಟಿರುವ ಕೃಷಿಕರಲ್ಲದವರು ಕೃಷಿ ಜಮೀನು ಖರೀದಿಸುವ ವಿವಾದಿಕ ಕರ್ನಾಟಕ ಭೂ ಸುಧಾರಣೆಗಳ (ಎರಡನೇ ತಿದ್ದುಪಡಿ)ವಿಧೇಯಕವನ್ನು ಸರ್ಕಾರ ಸದನದಲ್ಲಿ ಮಂಡನೆ ಮಂಡಿಸಿತು. 

ಕಂದಾಯ ಸಚಿವ ಆರ್.ಅಶೋಕ್ ಮಂಗಳವಾರ ವಿಧೇಯಕವನ್ನು ಮಂಡಿಸಿದರು. ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವ ಆಸಕ್ತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ 1974ರ ಕರ್ನಾಟಕ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡುವ ಮಹತ್ವದ ತೀರ್ಮಾನ ಕೈಗೊಂಡಿದೆ. ಕೃಷಿಯೇತರರು ಕೃಷಿ ಭೂಮಿ ಖರೀದಿಸಲು ಅನುವು ಮಾಡಿಕೊಡ್ಡಿದೆ ಎಂದರು. 

2020ನೇ ಸಾಲಿನ ಕರ್ನಾಟಕ ಭೂ ಸುಧಾರಣೆಗಳ ವಿಧೇಯಕವು 1961ರ ಅಧಿನಿಯಮ 79ಎ, 79ಬಿ, 79ಸಿ ಪ್ರಕರಣಗಳನ್ನು ಬಿಟ್ಟುಬಿಡುವ ಪ್ರಸ್ತಾಪ ಮಾಡಲಾಗಿದೆ. ಎ ವರ್ಗದ ನೀರಾವರಿ ಭೂಮಿಯು ಕೃಷಿ ಉದ್ದೇಶಕ್ಕೆ ಮಾತ್ರ ಮಾರಾಟ ಮಾಡುವ ಪ್ರಸ್ತಾಪ ಮಾಡಲಾಗಿದೆ. ಕೃಷಿ ಭೂಮಿಯ ಖರೀದಿಗಾಗಿ ಇರುವ ನಿರ್ಬಂಧವನ್ನು ತೆಗೆದುಹಾಕಲಾಗಿದೆ. ಕೃಷಿ ಉದ್ದೇಶಕ್ಕಾಗಿ ಮಾತ್ರ ಬಳಸುವುದರ ಮೇಲಿನ ನಿರ್ಬಂಧವನ್ನು ತೆಗೆದುಹಾಕಲಾಗುತ್ತಿದೆ ಎಂದು ತಿಳಿಸಿದರು. 

ಈ ವೇಳೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ ವಿರೋಧ ಪಕ್ಷಗಳ ನಾಯಕರು, ಮಸೂದೆ ಕುರಿತು ಮತ್ತೊಂದು ದಿನ ಸುದೀರ್ಘ ಚರ್ಚೆ ನಡೆಸುವ ಅಗತ್ಯವಿದೆ ಎಂದು ಆಗ್ರಹಿಸಿದರು.

ಮಂಡನೆಯಾದ ಇತರ ಮಸೂದೆಗಳು ಇಂತಿವೆ...
ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಮಸೂದೆ, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಮಸೂದೆ, ಕರ್ನಾಟಕ ಭಿಕ್ಷಾಟನೆ ನಿಷೇಧ (ತಿದ್ದುಪಡಿ) ಮಸೂದೆ,  ಕನ್ನಡ ವಿಶ್ವವಿದ್ಯಾಲಯ ಮತ್ತು ಇತರ ಕೆಲವು ಕಾನೂನುಗಳ (ತಿದ್ದುಪಡಿ) ಮಸೂದೆ,  ನಿವೃತ್ತಿ ವೇತನಗಳು ಮತ್ತು ಭತ್ಯೆಗಳು ಹಾಗೂ ಇತರ ಕಾನೂನು (ತಿದ್ದುಪಡಿ) ಮಸೂದೆ, 2020 ನೇ ಸಾಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ(ತಿದ್ದುಪಡಿ) ಮಸೂದೆ, 2020ನೇ ಸಾಲಿನ ಕರ್ನಾಟಕ ವಿಧಾನ ಮಂಡಲ ಸಂಬಳಗಳು ಮಸೂದೆ, 2020ನೇ ಸಾಲಿನ ಕರ್ನಾಟಕ ಕೈಗಾರಿಕೆಗಳ (ಸೌಲಭ್ಯ) (ತಿದ್ದುಪಡಿ) ಮಸೂದೆ, 2020ನೇ ಸಾಲಿನ ಕರ್ನಾಟಕ ಪೌರಸಭೆಗಳ (ತಿದ್ದುಪಡಿ) ಮಸೂದೆ, ಖಾಸಗಿ ವೈದ್ಯಕೀಯ ಸಂಸ್ಥೆಗಳ(ತಿದ್ದುಪಡಿ) ಮಸೂದೆ.

SCROLL FOR NEXT