ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನೂ ಎರಡು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಹೀಗಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದು ಮತ್ತು ನಾಳೆ ಕರಾವಳಿ, ಶಿವಮೊಗ್ಗ, ಹಾಸನ, ಕೊಡಗು, ಯಾದಗಿರಿ, ರಾಯಚೂರು, ಕಲಬುರ್ಗಿ, ಧಾರವಾಡ, ಹಾವೇರಿ ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದೂ ಹವಾಮಾನ ಇಲಾಖೆ ಮನ್ಸೂಚನೆ ನೀಡಿ ಎಚ್ಚರಿಸಿದೆ.