ಶಾಸಕ ಬಿ ನಾರಾಯಣರಾವ್ 
ರಾಜ್ಯ

ಬಸವ ಕಲ್ಯಾಣ ಶಾಸಕ ಬಿ ನಾರಾಯಣರಾವ್ ನಿಧನ

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾರಾಯಣರಾವ್ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. 

ಬೀದರ್: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾರಾಯಣರಾವ್ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. 

ಕೋವಿಡ್-19 ಹಾಗೂ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ನಾರಾಯಣರಾವ್ ಅವರಿಗೆ ಆಗಸ್ಟ್ 31ರಂದು ಸೋಂಕು ದೃಢಪಟ್ಟಿತ್ತು. ಆಪ್ತರ ಸಲಹೆಯ ಮೇರೆಗೆ ಸೆಪ್ಟೆಂಬರ್ 1ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಮರುದಿನ ಚೇತರಿಸಿಕೊಂಡಿದ್ದರು. ನಂತರ ರಾಜಕೀಯ ಮುಖಂಡರು ಹಾಗೂ ಗೆಳೆಯರಿಗೆ ಮೊಬೈಲ್‌ ಕರೆ ಮಾಡಿ ‘ನಾನು ಕ್ಷೇಮವಾಗಿದ್ದೇನೆ. ನನ್ನ ಆರೋಗ್ಯ ಸುಧಾರಣೆಗೆ ಪ್ರಾರ್ಥಿಸಿದ ನಿಮಗೆಲ್ಲರಿಗೂ ವಂದನೆಗಳು’ ಎಂದು ಹೇಳಿದ್ದರು.  ಮತ್ತೆ ಆರೋಗ್ಯದಲ್ಲಿ ಏರುಪೇರು ಆಗಿತ್ತು.

ನಂತರದಲ್ಲಿ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡು ತೊಂದರೆ ಅನುಭವಿಸಿದ್ದರು. ಕಾಮಾಲೆ, ಅಧಿಕ ರಕ್ತದೊತ್ತಡದಿಂದ ಇನ್ನಷ್ಟು ಪರಿಸ್ಥಿತಿ ಬಿಗಡಾಯಿಸಿದ್ದರಿಂದ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತು. 

ನಾರಾಯಣರಾವ್ ಅವರು, ಮೈತ್ರಿ ಸರ್ಕಾರದ ವೇಳೆ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!