ನಾರಾಯಣರಾವ್ 
ರಾಜ್ಯ

ಕೊರೋನಾ ಸೋಂಕು: ಬಸವಕಲ್ಯಾಣ ಕ್ಷೇತ್ರದ ಶಾಸಕ ನಾರಾಯಣರಾವ್ ಸ್ಥಿತಿ ಗಂಭೀರ

ಕೊರೋನಾ ಸೋಂಕು ತಗುಲಿರುವ ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣರಾವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. 

ಬೆಂಗಳೂರು: ಕೊರೋನಾ ಸೋಂಕು ತಗುಲಿರುವ ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣರಾವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. 

ಕೊರೋನಾ ಸೋಂಕು ಹಿನ್ನೆಲೆಯಲ್ಲಿ ನಾರಾಯಣರಾವ್ ಅವರು ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ನಾರಾಯಣರಾವ್ ಅವರು ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಗಳು ತಿಳಿಸಿವೆ. 

ನಾರಾಯಣರಾವ್ ಅವರು ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ವೈದ್ಯರ ತಂಡ ಅವರ ಆರೋಗ್ಯದ ಮೇಲೆ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಮಣಿಪಾಲ್ ಆಸ್ಪತ್ರೆಯ ನಿರ್ದೇಶಕ ಮನೀಶ್ ರೈ ಅವರು ಹೇಳಿದ್ದಾರೆ. 

ನಾರಾಯಣರಾವ್ ಅವರು ಕಂದಾಯ ಸಚಿವ ಆರ್.ಅಶೋಕ್ ಅವರೊಂದಿಗೆ ಕೆಲ ವಾರಗಳ ಹಿಂದೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆ ಬಳಿಕ ಜ್ವರದಿಂದ ಬಳಲುತ್ತಿದ್ದರು. 

ಬೀದರ್ ಜಿಲ್ಲೆಯ ಬಸವಕಲ್ಯಾಣದ ಶಾಸಕರಾದ ರಾವ್ ಅವರು 2018 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮಲ್ಲಿಕಾರ್ಜುನ್ ಖೂಬಾ ಮತ್ತು ಜೆಡಿಎಸ್‌ನ ಪಿಜಿಆರ್ ಸಿಂಧಿಯಾ ಅವರನ್ನು ಸೋಲಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಿ 7 ಸಭೆ: ಸಂಬಂಧಗಳಲ್ಲಿನ ಬಿಕ್ಕಟ್ಟಿನ ನಡುವೆ ಪ್ರಧಾನಿ ಮೋದಿ-ಡೊನಾಲ್ಡ್ ಟ್ರಂಪ್ ಪರಸ್ಪರ ಶುಭಾಶಯ ವಿನಿಮಯ; ಜೂ.17 ರಂದು ದ್ವಿಪಕ್ಷೀಯ ಸಭೆ

'ನಾನಿಲ್ಲದಿದ್ದರೆ ಇಸ್ರೇಲ್ ಇರುತ್ತಿರಲಿಲ್ಲ': ನೆತನ್ಯಾಹು ವಿರುದ್ಧ ಟ್ರಂಪ್ ಅಸಮಾಧಾನ; 'ಅವರಿಗೆ' ಸಾಧ್ಯವಾಗದಿದ್ದರೆ ಹಿಜ್ಬೊಲ್ಲಾನ ಸಿರಿಯಾ ನೋಡಿಕೊಳ್ಳುತ್ತೆ; Video

ಸಿಎಂ ಡಿಕೆ ಶಿವಕುಮಾರ್ ವಿಶೇಷ ಕರ್ತವ್ಯಾಧಿಕಾರಿಯಾಗಿ ಬಿ.ಎಸ್. ಶ್ರೀಧರ್ ನೇಮಕ

'ಭಾರತದ ಡಿಜಿಟಲ್ ಪಾವತಿ ವ್ಯವಸ್ಥೆ ಹಲವು ವರ್ಷಗಳಷ್ಟು ಮುಂದಿದೆ': ಸ್ಲೋವೇನಿಯಾದ ಪ್ರವಾಸಿ ಮಹಿಳೆ ಮೆಚ್ಚುಗೆ

ಶ್ವೇತಭವನದ UFC ಕಾರ್ಯಕ್ರಮದ ಮೇಲೆ ಯೋಜಿತ ದಾಳಿ ಸಂಚು ವಿಫಲ, ತಪ್ಪಿದ ಭಾರಿ ಅನಾಹುತ: ಐವರ ಬಂಧನ

SCROLL FOR NEXT