ರಾಜ್ಯ

ಆಂಗ್ಲ ಮಾಧ್ಯಮಕ್ಕೆ ಒಲವು: 1,400 ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮೀಡಿಯಂ ಆರಂಭ

Sumana Upadhyaya

ಬೆಂಗಳೂರು: ಆಂಗ್ಲಭಾಷೆಯಲ್ಲಿ ಶಿಕ್ಷಣ ನೀಡುವ ರಾಜ್ಯದ 1,400ಕ್ಕೂ ಹೆಚ್ಚು ಶಾಲೆಗಳನ್ನು ರಾಜ್ಯ ಸರ್ಕಾರ ಗುರುತಿಸಿದೆ. ಒಂದನೇ ತರಗತಿಯಿಂದ ಇಲ್ಲಿ ಮಕ್ಕಳಿಗೆ ಆಂಗ್ಲಭಾಷೆಯಲ್ಲಿ ಬೋಧಿಸಲಾಗುತ್ತದೆ.

ಇವುಗಳಲ್ಲಿ ಸಾವಿರ ಶಾಲೆಗಳು ಕನ್ನಡ ಮಾಧ್ಯಮ ಮತ್ತು 400 ಉರ್ದು ಮಾಧ್ಯಮ ಶಾಲೆಗಳಾಗಿವೆ. ಇದು ಈಗಾಗಲೇ ಇರುವ ಸಾವಿರ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗೆ ಹೆಚ್ಚುವರಿಯಾಗಿದೆ.

ಈ ಶಾಲೆಗಳಲ್ಲಿ ಪಠ್ಯಪುಸ್ತಕ ಎರಡು ಭಾಷೆಗಳಲ್ಲಿ ಇರುತ್ತದೆ. ಇಂಗ್ಲಿಷ್ ಮತ್ತು ಉರ್ದು ಅಥವಾ ಇಂಗ್ಲಿಷ್ ಮತ್ತು ಕನ್ನಡ ಭಾಷೆಗಳಲ್ಲಿ ಮುದ್ರಿತವಾಗಿರುತ್ತದೆ. ಈ ವರ್ಷಕ್ಕೆ ಪಠ್ಯಪುಸ್ತಕವನ್ನು ಮುದ್ರಿಸುವ ಕಾರ್ಯ ಈಗಾಗಲೇ ಆರಂಭವಾಗಿದ್ದು ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಹಿಂದಿನ ವರ್ಷ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿ 30 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ದಾಖಲಾಗಿದ್ದರು. ಪ್ರತಿ ತರಗತಿಗೆ 30 ಮಕ್ಕಳಿಗಿಂತ ಹೆಚ್ಚು ದಾಖಲಾಗಬಾರದೆಂದು ಸರ್ಕಾರದ ನಿಯಮವಿದ್ದಿದ್ದರಿಂದ ಹಲವು ಮಕ್ಕಳಿಗೆ ಅವಕಾಶ ಸಿಕ್ಕಿರಲಿಲ್ಲ.

ರಾಜ್ಯದ 1,400 ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಪ್ರತಿ ತರಗತಿಗೆ 30ಕ್ಕೆ ಮಿತಿಗೊಳಿಸಲಾಗಿದೆ. ಇದರಿಂದ ಶಿಕ್ಷಣ ಇಲಾಖೆಗೆ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಈ ವರ್ಷ 42 ಸಾವಿರ ಹೆಚ್ಚುವರಿ ವಿದ್ಯಾರ್ಥಿಗಳು ದಾಖಲಾಗಲಿದ್ದಾರೆ. 224 ಕ್ಷೇತ್ರಗಳಲ್ಲಿ ಶಾಲೆಗಳಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಿ ಉಮಾಶಂಕರ್ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ತಿಳಿಸಿದ್ದಾರೆ. ಪ್ರತಿ ಕ್ಷೇತ್ರದಲ್ಲಿ ಸರ್ಕಾರದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಇಂಗ್ಲಿಷನ್ನು ಜಾರಿಗೆ ತರಲಾಗುತ್ತಿದೆ.

ಸರ್ಕಾರಿ ಶಾಲೆಗಳಲ್ಲಿ ಖಾಸಗಿ ಶಾಲಾ ವಿದ್ಯಾರ್ಥಿಗಳು ಈ ವರ್ಷ ದಾಖಲಾಗುತ್ತಿರುವ ಸಮಯದಲ್ಲಿ ಈ ಪ್ರವೃತ್ತಿ ಕಂಡುಬರುತ್ತಿದೆ. ಸರ್ಕಾರಿ ಶಾಲೆಯಲ್ಲಿ ಆಂಗ್ಲಮಾಧ್ಯಮವನ್ನು ಹಿಂದಿನ ಹೆಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ತರಲಾಗಿದ್ದು ಎರಡನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ. 2ನೇ ತರಗತಿಯ ಪಠ್ಯಪುಸ್ತಕವನ್ನು ಈಗಾಗಲೇ ಮುದ್ರಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

SCROLL FOR NEXT