ರಾಜ್ಯ

ಭೂ ಕಂದಾಯ ತಿದ್ದುಪಡಿ ಮಸೂದೆ ಅಂಗೀಕಾರ: ಅರಣ್ಯ ಭೂಮಿಯಲ್ಲಿ ಕೃಷಿ, ಮನೆ ನಿರ್ಮಿಸಿದವರಿಗೆ ಅನುಕೂಲ

Nagaraja AB

ಬೆಂಗಳೂರು: 2020 ನೇ ಸಾಲಿನ ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಧ್ವನಿಮತದಿಂದ ಅಂಗೀಕರಿಸಲಾಯಿತು.

ಇದಕ್ಕೂ ಮುನ್ನ ವಿಧೇಯಕ ಮಂಡಿಸಿ  ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್,  ಅರಣ್ಯ ಭೂಮಿಯಲ್ಲಿ ಕೃಷಿ ಹಾಗೂ ಮನೆ ಕಟ್ಟಿಕೊಂಡು ಜೀವನ ನಡೆಸುತ್ತಿರುವ ರಾಜ್ಯದ ಜನರಿಗೆ ಅನುಕೂಲವಾಗುವಂತೆ ರಾಜ್ಯದ 6.64 ಲಕ್ಷ ಹೆಕ್ಟೇರ್ ರಕ್ಷಿತಾರಣ್ಯವನ್ನು ಕಂದಾಯ ಇಲಾಖೆಗೆ ವರ್ಗಾಯಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಬಗರ ಹುಕುಂ ಸಾಗುವಳಿದಾರರು ಅರ್ಜಿ ಸಲ್ಲಿಸಲು ಎರಡು ವರ್ಷ ಅವಧಿ ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.

ಹಲವಾರು ವರ್ಷಗಳಿಂದ ನೆನೆಗು ದಿಗೆ ಬಿದ್ದದ್ದ ಬಗರಂ ಹುಕುಂ ಭೂಮಿ,ಅರಣ್ಯ ಭೂಮಿ ಬಳಕೆ ಮಾಡಿಕೊಂಡು ಕೃಷಿ ಹಾಗೂ ಇತರೆ ಭೂಮಿಯ ನ್ನು ಬಳಸಿಕೊಂಡು ಲಕ್ಷಾಂತರ ಜನರು ಬದುಕು ಕಟ್ಟಿಕೊಂಡಿದ್ದಾರೆ.ಹೀಗಾಗಿ ಶಾಸಕರು,ಜನರ ಬೇಡಿಕೆ ಮೇರೆಗೆ ಕಾಯ್ದೆಗೆ ತಿದ್ದುಪಡಿ ತರುವ ಕೆಲಸ ಮಾಡಲಾಗಿದೆ ಎಂದು ಸಚಿವ ಆರ್.ಅಶೋಕ್ ತಿಳಿಸಿದರು.

SCROLL FOR NEXT