ರಾಜ್ಯ

ಕೃಷಿ ಸಂಬಂಧಿತ ಮಸೂದೆಗೆ ವಿರೋಧ: ಮೈಸೂರು ಬ್ಯಾಂಕ್ ಸರ್ಕಲ್ ಸೇರಿ ಬೆಂಗಳೂರಿನ ವಿವಿಧೆಡೆ ಪ್ರತಿಭಟನೆ

Manjula VN

ಬೆಂಗಳೂರು: ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಸೇರಿದಂತೆ ಕೃಷಿಗೆ ಸಂಬಂಧಿಸಿದ ಮಸೂದೆಗಳನ್ನು ವಿರೋಧಿಸಿ 35ಕ್ಕೂ ಅಧಿಕ ರೈತ ಸಂಘಟನೆಗಳು ಶುಕ್ರವಾರ ರಾಜ್ಯಾದ್ಯಂತ ಹೆದ್ದಾರಿ ಬಂದ್ ನಡೆಸಿ ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರಿನ ಹೊರವಲಯ ಮತ್ತು ರಾಜ್ಯದ ಪ್ರಮುಖ ಹೆದ್ದಾರಿಗಳಲ್ಲಿ ರೈತರು ರಸ್ತೆ ತಡೆ ನಡೆಸುತ್ತಿದ್ದಾರೆ.

ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ನೂರಾರು ರೈತರು ಪ್ರತಿಭಟನೆ ನಡೆಸಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

ಪ್ರತಿಭಟನೆಗೆ ವಿವಿಧ ಸಂಘಟನೆಗಳೂ ಕೂಡ ಸಾಥ್ ನೀಡಿದ್ದು, ತಲೆಯ ಮೇಲೆ ಕಲ್ಲು ಹೊತ್ತುಕೊಂಡು ಪ್ರತಿಭಟನೆ ನಡೆಸುತ್ತಿದ್ದ ದೃಶ್ಯ ಮೈಸೂರು ಬ್ಯಾಂಕ್ ನಲ್ಲಿ ಕಂಡುಬಂದಿತು. ಸರ್ಕಾರ ನಮ್ಮ ತಲೆ ಮೇಲೆ ಕಲ್ಲು ಹಾಕುತ್ತಿದೆ ಎಂದು ಆರೋಪಿಸಿ ವಿನೂತನ ಪ್ರತಿಭಟನೆ ನಡೆಸಲಾಗುತ್ತಿದೆ.

ಮೈಸೂರು ಬ್ಯಾಂಕ್ , ಮೌರ್ಯ ವೃತ್ತದಲ್ಲಿ ನೂರಾರು ರೈತರು ಸೇರಿರುವುದರಿಂದ ಸುತ್ತಮುತ್ತಲ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ ಎಂದು ತಿಳಿದುಬಂದಿದೆ. 

SCROLL FOR NEXT