ರಾಜ್ಯ

ರೈತರ ಹಿತದೃಷ್ಟಿಯಿಂದ ಕೃಷಿ ಕ್ಷೇತ್ರ ಸುಧಾರಣೆ ಮಾಡಲಾಗಿದೆ: ಸಚಿವ ಬಿ.ಸಿ. ಪಾಟೀಲ್

Manjula VN

ಬೆಂಗಳೂರು: ರೈತರ ಹಿತದೃಷ್ಟಿಯಿಂದ ಭೂ ಸುಧಾರಣಾ ತಿದ್ದುಪಡಿ ಹಾಗೂ ಎಪಿಎಂಸಿ ಮಸೂದೆಗಳನ್ನು ಜಾರಿಗೆ ತರಲಾಗಿದ್ದು, ಹೀಗಾಗಿ ಈ ಸಂಬಂಧ ಸರ್ಕಾರ ಯಾವುದೇ ಬದಲಾವಣೆಗಳನ್ನೂ ಮಾಡುವುದಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಶುಕ್ರವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಭೂ ಸುಧಾರಣಾ ತಿದ್ದುಪಡಿ ಹಾಗೂ ಎಪಿಎಂಸಿ ಮಸೂದೆಗಳಲ್ಲಿ ಬದಲಾವಣೆ ಮಾಡುವ ಯಾವುದೇ ಪ್ರಶ್ನೆಗಳೂ ಏಳುವುದಿಲ್ಲ. ರೈತರ ಹಿತದೃಷ್ಟಿಯಿಂದ ಸರ್ಕಾರ ಈ ಕ್ರಮಗಳನ್ನು ಕೈಗೊಂಡಿದೆ. ಮಸೂದೆಯಿಂದ ರೈತರಿಗೆ ಲಾಭವಾಗಲಿದೆ ಎಂದು ಹೇಳಿದ್ದಾರೆ. 

ರೈತರ ಸಂಘಟನೆಗಳು ಮಸೂದೆಗೆ ಬೆಂಬಲ ವ್ಯಕ್ತಪಡಿಸಬೇಕು. ಪ್ರಸ್ತುತ ಮಸೂದೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಸಂಘಟನೆಗಳು, ಪ್ರತಿಭಟನೆಯಲ್ಲಿ ಭಾಗಿಯಾಗಿರುವವರು ರೈತರೇ ಅಲ್ಲ. ರಾಜ್ಯದ 30 ಜಿಲ್ಲೆಗಳಿಗೆ ಭೇಟಿ ನೀಡಲಾಗಿತ್ತು, ಮಸೂದೆ ಕುರಿತು ಮಾಹಿತಿ ನೀಡಿದ್ದೇವೆ. ಈ ವೇಳೆ ರೈತರು ಮಸೂದೆಗೆ ಒಪ್ಪಿಗೆ ನೀಡಿದ್ದಾರೆ. ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಂಘಟನೆಗಳು ರೈತ ಸಂಘಟನೆಗಳಲ್ಲ. ರೈತರು ಮಸೂದೆಗೆ ಬೆಂಬಲ ನೀಡುವಂತೆ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದೇನೆಂದು ತಿಳಿಸಿದ್ದಾರೆ. 

SCROLL FOR NEXT