ರಾಜ್ಯ

ಕೋವಿಡ್: ರಾಜ್ಯದಲ್ಲಿಂದು 8,811 ಹೊಸ ಪ್ರಕರಣ, 5,417 ಮಂದಿ ಡಿಸ್ಚಾರ್ಜ್

ರಾಜ್ಯದಲ್ಲಿ ಕೊರೋನಾವೈರಸ್ ಅಬ್ಬರ ಮುಂದುವರಿದಿದ್ದು ಇಂದು ಹೊಸದಾಗಿ 8,811 ಮಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇದಲ್ಲದೆ ಇಂದು 5,417 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 

ಬೆಂಗಳೂರು: ರಾಜ್ಯದಲ್ಲಿ ಕೊರೋನಾವೈರಸ್ ಅಬ್ಬರ ಮುಂದುವರಿದಿದ್ದು ಇಂದು ಹೊಸದಾಗಿ 8,811 ಮಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇದಲ್ಲದೆ ಇಂದು 5,417 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 

ರಾಜ್ಯದಲ್ಲಿ ಇದುವರೆಗೆ 5,66,023 ಕೋವಿಡ್ ಸೋಂಕು ಪತ್ತೆಯಾಗಿದೆ. ಅದರ ಪೈಕಿ 4,55,719 ಮಂದಿ ಗುಣಮುಖರಾಗಿದ್ದಾರೆ. ಇಂದು ಒಟ್ಟಾರೆ 86 ಮಂದಿ ಕೋವಿಡ್ ಗೆ ಬಲಿಯಾಗಿದ್ದರೆ  ಇದುವರೆಗೆ ರಾಜ್ಯದಲ್ಲಿ  8,503 ಮಂದಿ ಕೊರೋನಾ ಕಾರಣದಿಂದ ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ ಸತತ ಮೂರನೇ ದಿನ ನಾಲ್ಕು ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲಾಗಿದ್ದು ಇಂದು 4,083 ಹೊಸ ಕೇಸ್ ಗಳು ದಾಖಲಾಗಿದೆ. 27 ಮಂದಿ ಇಂದು ಮಹಾಮಾರಿಯಿಂದ ಸಾವಿಗೀಡಾಗಿದ್ದಾರೆ. ನಗರದಲ್ಲಿ ಇದುವರೆಗೆ 2,16,630 ಮಂದಿಗೆ ಕೋವಿಡ್ ಸೋಂಕು ತಗುಲಿದ್ದು 2,821 ಮಂದಿ ಸಾವಿಗೀಡಾಗಿದ್ದಾರೆ. ಇನ್ನು ಬೆಂಗಳೂರಿನಲ್ಲಿ ಇಂದು 2,821 ಮಂದಿ ಗುಣಮುಖವಾಗಿ ಮನೆಗೆ ಮರಳಿದ್ದರೆ ಇದುವರೆಗೆ ಗುಣಮುಖರಾದವರ ಸಂಖ್ಯೆ 1,70,430 ಗೆ ತಲುಪಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!