ರಾಜ್ಯ

ಅಕ್ರಮ ಗಣಿಗಾರಿಕೆ: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್

Manjula VN

ಬೆಂಗಳೂರು: ಕೋಲಾರ ಜಿಲ್ಲೆಯ ಗುಂಡೇನಹಳ್ಳಿ ಬೆಟ್ಟದಲ್ಲಿನ 37 ಎಕರೆ ಗೋಮಾಲದಲ್ಲಿ ಈ ಹಿಂದಿನಂತೆ ಗಿಡ ನೆಡಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ. 

ಅಕ್ರಮ ಗಣಿಗಾರಿಕೆ ನಡೆಸಿದವರಿಗೆ ವಿಧಿಸಲಾಗಿದ್ದ ರೂ.106 ಕೋಟಿ ದಂಡ ವಸೂಲಿ ಮಾಡದೆ ಅವರ ಪರವಾನಗಿಯನ್ನು ಅಧಿಕಾರಿಗಳು ನವೀಕರಿಸಿದ್ದಾರೆ. 45.16 ಎಕರೆ ಸರ್ಕಾರಿ ಭೂಮಿಯಲ್ಲಿ ಅಕ್ರಮ ಗಣಿಗಾರಿಗೆ ನಡೆಸಲಾಗಿದೆ. ಅದರಲ್ಲಿ ಸುಮಾರು 37 ಎಕರೆಯಷ್ಟು ಜಾಗದಲ್ಲಿ ಮರ ಗಿಡಗಳಿದ್ದವು. ಈಗ ಆ ಪ್ರದೇಶ ಸಂಪೂರ್ಣವಾಗಿ ನಾಶವಾಗಿದೆ. ಸುಮಾರು 9,500 ಮರಗಳು ನಾಶವಾದ ನಂತರವೂ ಅರಣ್ಯ ಇಲಾಖೆ ಯಾವುದೇ ಕ್ರಮಗೊಂಡಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಅಲ್ಲದೆ, ಸರ್ಕಾರಿ ಭೂಮಿ ಒತ್ತುವರಿ ಮಾಡಿದವರು ಮತ್ತು ಅದಕ್ಕೆ ಅವಕಾಶ ಕಲ್ಪಿಸಿದ ಸರ್ಕಾರಿ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ತನಿಖೆಗೆ ನಿರ್ದೇಶಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ. 

ರವೀಂದ್ರ ಮತ್ತು ಇತರೆ ನಾಲ್ವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ಸರ್ಕಾರಕ್ಕೆ ನೋಟಿಸ್ ನೀಡಲು ಆದೇಶಿಸಿದೆ. 

SCROLL FOR NEXT