ಸಿದ್ದರಾಮಯ್ಯ 
ರಾಜ್ಯ

ರೈತರ ಪಾಲಿಗೆ ಭೂ ಸುಧಾರಣೆ ಕಾಯ್ದೆ ಕರಾಳ ಶಾಸನ, ಭೂತಾಯಿಗೆ ಮಾಡಿದ ದ್ರೋಹ: ಸಿದ್ದರಾಮಯ್ಯ

ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ರ 79ಎ, ಬಿ, ಸಿ ಮತ್ತು 80ನೇ ಕಲಂಗಳನ್ನು ರದ್ದುಗೊಳಿಸಿ, ಕಲಂ 63ರಲ್ಲಿ ನಿಗದಿಪಡಿಸಿದ ಭೂ ಒಡೆತನದ ಮಿತಿಯನ್ನು ದ್ವಿಗುಣಗೊಳಿಸುವ ರಾಜ್ಯ ಸರ್ಕಾರ ನಿರ್ಧರಿಸಿ ರುವುದು ಕೃಷಿ ಕ್ಷೇತ್ರದ ಶವಪೆಟ್ಟಿಗೆಗೆ ಹೊಡೆದ ಕೊನೆ ಮೊಳೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಬೆಂಗಳೂರು: ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ರ 79ಎ, ಬಿ, ಸಿ ಮತ್ತು 80ನೇ ಕಲಂಗಳನ್ನು ರದ್ದುಗೊಳಿಸಿ, ಕಲಂ 63ರಲ್ಲಿ ನಿಗದಿಪಡಿಸಿದ ಭೂ ಒಡೆತನದ ಮಿತಿಯನ್ನು ದ್ವಿಗುಣಗೊಳಿಸುವ ರಾಜ್ಯ ಸರ್ಕಾರ ನಿರ್ಧರಿಸಿ ರುವುದು ಕೃಷಿ ಕ್ಷೇತ್ರದ ಶವಪೆಟ್ಟಿಗೆಗೆ ಹೊಡೆದ ಕೊನೆ ಮೊಳೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯ ಪರ್ಯಾಲೋಚನೆ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉದ್ಯಮಿ ಗಳು ಬಹುರಾಷ್ಟ್ರೀಯ ಕಂಪೆನಿಗಳು ಮತ್ತು ರಿಯಲ್ ಎಸ್ಟೇಟ್ ವ್ಯಾಪಾರಿ ಗಳು ಅಸಹಾಯಕ ರೈತರಿಗೆ ವಂಚಿಸಿ ಸುಲಭ ದಲ್ಲಿ ಭೂಮಿ ಖರೀದಿ ಮಾಡಲು ನೆರವಾಗುವ ಉದ್ದೇಶದಿಂದಲೇ ಈ ತಿದ್ದುಪಡಿ ತರಲಾಗಿದೆ. ಇದರಲ್ಲಿ ಯಾವ ರೈತರ ಹಿತದೃಷ್ಟಿಯೂ ಕಂಡು ಬರುತ್ತಿಲ್ಲವೆಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ದಿವಂಗತ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಸರ್ಕಾರದಲ್ಲಿ ಭೂ ಸುಧಾರಣೆ ಕಾಯ್ದೆ ಜಾರಿಗೆ ತಂದು ಉಳುವವನೇ ಭೂಮಿಯ ಒಡೆಯನನ್ನಾಗಿ ಮಾಡಿದ್ದರು.ಈ ಸರ್ಕಾರ ಉಳ್ಳವನನ್ನೇ ಭೂ ಒಡೆಯನನ್ನಾಗಿ ಮಾಡಲು ಹೊರಟಿದೆ.ಕೃಷಿ ಭೂಮಿ ಖರೀದಿಗೆ 25 ಲಕ್ಷರೂ ಆದಾಯದ ಮಿತಿಯ ಸೆಕ್ಷನ್ 79ಎ, ಕೃಷಿಯೇತರರಿಗೆ ಭೂಮಿ ಖರೀದಿ ನಿಷೇಧಿಸಿದ್ದ ಸೆಕ್ಷನ್ 79ಸಿ ರದ್ದತಿ ಭೂ ತಾಯಿಗೆ ಮಾಡಿ ದ್ರೋಹ ಎಂದು ಹೇಳಿದರು.

ಈ ಎಲ್ಲಾ ತಿದ್ದುಪಡಿ ಪರಿಣಾಮವಾಗಿ ಕಾರ್ಪೊರೇಟ್ ಸಂಸ್ಥೆಗಳು, ರಿಯಲ್ ಎಸ್ಟೇಟ್ ಕುಳಗಳು ಮತ್ತು ಶ್ರೀಮಂತರು ಸುಲಭವಾಗಿ ಕೃಷಿ ಭೂಮಿಯನ್ನು ಕಬಳಿಸಬಹುದು.ಸಣ್ಣ ರೈತಾಪಿಗಳು ಇನ್ನಷ್ಟು ವೇಗವಾಗಿ ಹಾಗೂ ಶಾಸನಬದ್ಧವಾಗಿ ಕೃಷಿಯಿಂದ ಹೊರದೂಡಲ್ಪಡುತ್ತಾರೆ.ಭೂ ಸುಧಾರಣೆ ಕಾಯ್ದೆಯ ಉಲ್ಲಂಘನೆ ಮಾಡಿರುವ ಅಂದಾಜು 60 ಸಾವಿರ ಎಕರೆ ಜಮೀನು ಒಳಗೊಂ ಡಿರುವ 13,814 ಪ್ರಕರಣಗಳು ರಾಜ್ಯದ ನ್ಯಾಯಾಲಯದಲ್ಲಿದ್ದವು,ಪ್ರಸ್ತಾಪಿತ ತಿದ್ದುಪಡಿಯಿಂದ ಈ ಎಲ್ಲ ಪ್ರಕರಣಗಳು ಪೂರ್ವಾನ್ವಯವಾಗುವಂತೆ ರದ್ದಾಗಿವೆ.ಅಕ್ರಮವೆಲ್ಲ ಸಕ್ರಮವಾಗಿ ದೆ.ಭೂಗಳ್ಳರನ್ನು ರಕ್ಷಿಸುವುದ ಕ್ಕಾಗಿಯೇ ತಿದ್ದುಪಡಿ ತರಲಾಗಿದೆ ಎಂದ ಅವರು,ಭೂಗಳ್ಳರಿಂದ ಆಡಳಿತ ಪಕ್ಷದವರಿಗೆ ಏನು ಲಾಭ ಎನ್ನುವುದನ್ನು ಇಲ್ಲಿ ವಿವರಿಸಲು ಹೋಗುವುದಿಲ್ಲವೆಂದರು.

ಭೂ ಸುಧಾರಣಾ ಕಾಯ್ದೆಯಿಂದಾಗಿ ಭ್ರಷ್ಟಾಚಾರ ಹೆಚ್ಚಾಗಿದೆ,ಅಧಿಕಾರಿಗಳು ಲಂಚ ಹೊಡೆಯುಲು ಅನುಕೂಲವಾಗಿದೆ ಎಂದು ಸರ್ಕಾರ ಹೇಳುತ್ತಿದೆ.ಲಂಚ ಎಲ್ಲಿ ಇಲ್ಲ ? ತಹಶೀಲ್ದಾರ್, ಪೊಲೀಸ್,ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಲಂಚ ಇಲ್ಲವೇ? ನಿರ್ಮೂಲನೆ ಮಾಡಬೇಕಾಗಿರುವುದು ಲಂಚವನ್ನೇ? ಇಲ್ಲ ಕಾನೂನನ್ನೇ ಎಂದು ಪ್ರಶ್ನಿಸಿದರು. ಅಧಿಕಾರಿಗಳು ಲಂಚಕೋರರಾಗಿದ್ದರೆ ಎಂದರೆ ಸರ್ಕಾರ ಅವರನ್ನು ನಿಯಂತ್ರಿಸಲು ವಿಫಲವಾಗಿದೆ ಅಥವಾ ಅವರ ಜತೆ ಶಾಮೀಲಾಗಿದೆ ಎಂದರ್ಥ.ಇದನ್ನೂ ಸಮರ್ಥಿಸಿಕೊಳ್ಳಲು ನಾಚಿಕೆ ಆಗುವುದಿಲ್ಲವೇ,ನೈತಿಕತೆ ಇಲ್ಲವೇ ಎಂದು ಸರ್ಕಾರದ ನಡೆ ವಿರುದ್ಧ ಲೇವಡಿ ಮಾಡಿದರು. ರೈತ ವಿರೋಧಿಯಾಗಿರುವ ಭೂ ಸುಧಾರಣಾ ತಿದ್ದುಪಡಿಯನ್ನು ನಾವು ಮಾತ್ರವಲ್ಲ ಆಡಳಿತ ಪಕ್ಷದ ಸದಸ್ಯರಲ್ಲಿ ಆತ್ಮಸಾಕ್ಷಿ ಇದ್ದರೆ ಅವರೂ ವಿರೋಧಿಸಬೇಕು ಎಂದು ಮನವಿ ಮಾಡಿದ ಅವರು ನಮ್ಮ ಹೋರಾಟ ಸದನಕ್ಕೆ ಸೀಮಿತವಲ್ಲ.ಮುಂದಿನ ದಿನಗಳಲ್ಲಿ ಬೀದಿಗಿಳಿದು ಹೋರಾಡುತ್ತೇವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT