ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕಲಬುರಗಿಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ

ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ತಾಲೂಕಿನ ಸಾವಳಗಿ ಬಳಿ ಸಂಭವಿಸಿದೆ.

ಕಲಬುರಗಿಯಲ್ಲಿ ಭೀಕರ ಅಪಘಾತ
Srinivasa Murthy VN
Updated On : 27 Sept 2020, 9:06 am

ಕಲಬುರಗಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ತಾಲೂಕಿನ ಸಾವಳಗಿ ಬಳಿ ಸಂಭವಿಸಿದೆ.

ಕಲಬುರಗಿ ತಾಲೂಕಿನ ಸಾವಳಗಿ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ ಮೃತರಲ್ಲಿ ನಾಲ್ವರು ಮಹಿಳೆಯರು ಮೂವರು ಪುರುಷರೂ ಸೇರಿದ್ದಾರೆ. ಕಲಬುರಗಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರೆಲ್ಲರೂ ಕಲಬುರಗಿಯ ಜಿಲ್ಲೆಯ ಆಳಂದದವರು ಎಂದು ಗುರುತಿಸಲಾಗಿದೆ.

ಗರ್ಭಿಣಿ ಇರ್ಫಾನಾ ಬೇಗಂ (25), ರುಬಿಯಾ ಬೇಗಂ (50), ಅಬೇದಾಬಿ ಬೇಗಂ (50), ಜಯಚುನಬಿ (60) ಹಾಗೂ ಮುನೀರ್ (28), ಮಹಮ್ಮದ್ ಅಲಿ (38), ಶೌಕತ್ ಅಲಿ (29) ಎಂಬುವವರೇ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.

Advertisement

Advertisement

ಕಲಬುರಗಿ ನಗರ ಸಂಚಾರಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement