ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್-19: ರಾಜ್ಯದಲ್ಲಿ ಗುಣಮುಖ ಪ್ರಮಾಣ ಶೇ.80.8ಕ್ಕೆ ಏರಿಕೆ

ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಒಂದೆಡೆ ಏರಿಕೆಯಾಗುತ್ತಿದ್ದರೆ, ಮತ್ತೊಂದೆಡೆ ಗುಣಮುಖರಾಗುತ್ತಿರುವವರ ಪ್ರಮಾಣ ಹೆಚ್ಚಳಗೊಳ್ಳುತ್ತಿರುವುದು ಕೊಂಚ ನಿರಾಳ ಎದುರಾಗುವಂತೆ ಮಾಡಿದೆ. 

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಒಂದೆಡೆ ಏರಿಕೆಯಾಗುತ್ತಿದ್ದರೆ, ಮತ್ತೊಂದೆಡೆ ಗುಣಮುಖರಾಗುತ್ತಿರುವವರ ಪ್ರಮಾಣ ಹೆಚ್ಚಳಗೊಳ್ಳುತ್ತಿರುವುದು ಕೊಂಚ ನಿರಾಳ ಎದುರಾಗುವಂತೆ ಮಾಡಿದೆ. 

ರಾಜ್ಯದಲ್ಲಿ ಶುಕ್ರವಾರದವರೆಗೂ ಒಟ್ಟಾರೆ 4,55,719 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇದರೊಂದಿಗೆ ಗುಣಮುಖರ ಪ್ರಮಾಣ ಶೇ.80.81ಕ್ಕೆ ಏರಿಕೆಯಾಗಿದೆ. ಜುಲೈ.20ರವರೆಗೂ ಇದರ ಪ್ರಮಾಣ ಶೇ.35.29ರಷ್ಟಿತ್ತು. ಗುಣಮುಖರ ಪ್ರಮಾಣ 80.81ಕ್ಕೆ ಏರಿಕೆಯಾಗುವ ಮೂಲಕ ಸೋಂಕಿನಿಂದ ಗುಣಮುಖರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆಗಳಿಂದ ಬಿಡುಗಡೆಯಾಗುತ್ತಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 4ನೇ ಸ್ಥಾನಕ್ಕೆ ಏರಿಕೆಯಾಗಿದೆ. 

ಪಟ್ಟಿಯಲ್ಲಿ ಮಹಾರಾಷ್ಟ್ರ 9,92,806 ಜನರು ಆಸ್ಪತ್ರೆಯಲ್ಲಿ ಬಿಡುಗಡೆಗೊಂಡಿರುವುದರೊಂದಿಗೆ ಮೊದಲ ಸ್ಥಾನ ಪಡೆದುಕೊಂಡಿದ್ದು, 5,97,294ದೊಂದಿಗೆ ಆಂಧ್ರಪ್ರದೇಶ ಎರಡನೇ ಸ್ಥಾನ. 5,19,448 ದೊಂದಿಗೆ ತಮಿಳುನಾಡು ಮೂರನೇ ಸ್ಥಾನ ಪಡೆದುಕೊಂಡಿದೆ. 

ಶೇಕಡಾ 60 ಕ್ಕಿಂತ ಕಡಿಮೆ ಚೇತರಿಕೆ ಪ್ರಮಾಣವನ್ನು ದಾಖಲಿಸುತ್ತಿದ್ದ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಇದೀಗ ಶೇಕಡಾ ಗುಣಮುಖರ ಪ್ರಮಾಣ ಶೇ. 75-80ರಷ್ಟಾಗಿದೆ. 

ಜುಲೈ ತಿಂಗಳಿನಲ್ಲಿ, ಮೈಸೂರಿನಲ್ಲಿ ಚೇತರಿಕೆ ಪ್ರಮಾಣವು ಶೇಕಡಾ 33.5 ರಷ್ಟಿದ್ದರೆ, ಸೆಪ್ಟೆಂಬರ್ 25 ರ ವೇಳೆಗೆ ಶೇ.80.8ಕ್ಕೆ ಏರಿಕೆಯಾಗಿದೆ. ಬಳ್ಳಾರಿಯಲ್ಲಿ ಚೇತರಿಕೆ ಪ್ರಮಾಣವು ಶೇಕಡಾ 44 ರಷ್ಟಿತ್ತು, ಇದೀಗ ಶೇಕಡಾ 84.2 ಆಗಿದೆ. ದಕ್ಷಿಣ ಕನ್ನಡದಲ್ಲಿ ಶೇ.36.4ರಷ್ಟಿದ್ದ ಗುಣಮುಖರ ಪ್ರಮಾಣ ಇದೀಗ ಶೇ.74.3 ಕ್ಕೆ ತಲುಪಿದೆ. ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ  ಶೇಕಡಾ 23.8 ರಷ್ಟಿದ್ದ ಚೇತರಿಕೆ ಪ್ರಮಾಣ ಇದೀಗ ಶೇ.79.0 ಕ್ಕೆ ಏರಿಕೆಯಾಗಿದೆ. 

ಕೊರೋನಾ ಸೋಂಕು ಹರಡುತ್ತಿದ್ದ ಆರಂಭಿಕ ದಿನಗಳಲ್ಲಿ ಜನರು ಪರೀಕ್ಷೆಗೊಳಗಾಗಲು ಮುಂದಕ್ಕೆ ಬರುತ್ತಿರಲಿಲ್ಲ. ಭೀತಿಗೊಳಗಾಗಿದ್ದರು. ರೋಗಲಕ್ಷಣ ಉಲ್ಭಣಗೊಳ್ಳುವವರೆಗೂ ಪರೀಕ್ಷೆಗೊಳಗಾಗುತ್ತಿರಲಿಲ್ಲ. ಆದರೆ, ಇದೀಗ ರೋಗಲಕ್ಷಣವಿಲ್ಲದೇ ಇದ್ದರೂ ಕೂಡ ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷೆಗೊಳಗಾಗುತ್ತಿದ್ದಾರೆ ಎಂದು ಆರೋಗ್ಯ ತಜ್ಞರು ಹೇಳಿದ್ದಾರೆ. 

ಲಕ್ಷಣರಹಿತ ಪ್ರಕರಣಗಳು ಹೆಚ್ಚಾಗಿ ಕಂಡು ಬಂದಷ್ಟು ಗುಣಮುಖರ ಪ್ರಮಾಣ ಕೂಡ ಏರಿಕೆಯಾಗುತ್ತದೆ ಎಂದು ರಾಜೀವ್ ಗಾಂಧಿ ಎದೆರೋಗ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ನಾಗರಾಜ್ ಅವರು ಹೇಳಿದ್ದಾರೆ. 

ನಾವು ಗಮನಿಸಿದ ಮತ್ತೊಂದು ವಿಚಾರ ಇದೆ, ಇತ್ತೀಚಿನ ದಿನಗಳಲ್ಲಿ ಸರ್ಕಾರದ ಮನೆಗಳು, ರಸ್ತೆಗಳನ್ನು ಸೀಲ್ಡೌನ್ ಮಾಡುವುದು, ಪೋಸ್ಟರ್ ಗಳನ್ನು ಅಂಟಿಸುವುದನ್ನು ನಿಲ್ಲಿಸಿದೆ. ಇದರಿಂದಾಗಿ ಸಾಮಾಜಿಕವಾಗಿ ಎದುರಾಗುವ ಕಳಂಕ ಭೀತಿ ಜನರಲ್ಲಿ ದೂರಾಗಿದೆ. ಹೀಗಾಗಿ ಪರೀಕ್ಷೆಗೊಳಗಾಗಲು ಮುಂದಾಗುತ್ತಿದ್ದಾರೆ. ಚಿಕಿತ್ಸೆಯ ನಿಯಮಗಳೂ ಕೂಡ ಬದಲಾಗಿದ್ದು, ರೆಮ್ಡೆಸಿವಿರ್ ನಂತಹ ಅನೇಕ ಔಷಧಿಗಳನ್ನು ಬಳಕೆ ಮಾಡಲಾಗುತ್ತಿದೆ. ಇದರಿಂದ ಚೇತರಿಕೆ ಪ್ರಮಾಣ ಏರಿಕೆಯಾಗಲು ಸಹಾಯವಾಗುತ್ತಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT