ರಾಜ್ಯ

ನಟಿ ಕಂಗನಾ ರಣಾವತ್ ವಿರುದ್ಧ ತುಮಕೂರಿನ ನ್ಯಾಯಾಲಯದಲ್ಲಿ ದೂರು ದಾಖಲು

Shilpa D

ತುಮಕೂರು: ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ  ತುಮಕೂರು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.

ಹೈಕೋರ್ಟ್ ವಕೀಲ ಹಾಗೂ ತುಮಕೂರು ನಿವಾಸಿ ಎಲ್‌.ರಮೇಶ್ ನಾಯಕ್ ಶುಕ್ರವಾರ ದೂರು ದಾಖಲಿಸಿದ್ದಾರೆ. ‘ಸೆ.22ರಂದು ಡಿಜಿಪಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಇ–ಮೇಲ್ ಮೂಲಕ ದೂರು ಸಲ್ಲಿಸಿದ್ದೆ. ಆದರೆ ಅಲ್ಲಿಂದ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ನ್ಯಾಯಾಲಯಕ್ಕೆ ದೂರು ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
 
ಸಂಸತ್ತಿನಲ್ಲಿ ಕೃಷಿ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದೆ. ಇದನ್ನು ವಿರೋಧಿಸಿ ಪ್ರತಿಭಟಿಸುತ್ತಿರುವ ರೈತರನ್ನು ಭಯೋತ್ಪಾದಕರು ಎಂದು ಕಂಗನಾ ಟ್ವಿಟ್ಟರ್ ನಲ್ಲಿ ಅಪಮಾನಿಸಿದ್ದಾರೆ. ಇದರಿಂದ ಲಕ್ಷಾಂತರ ರೈತರಿಗೆ ಅಪಮಾನ ಮಾಡಿದ್ದಾರೆ ಎಂದು ರಮೇಶ್ ದೂರಿನಲ್ಲಿ ಆರೋಪಿಸಿದ್ದಾರೆ.

ಕೃಷಿ ಮಸೂದೆ ಕುರಿತು ದೇಶಾದ್ಯಂತ ಭಾರೀ ಚರ್ಚೆ ನಡೆಯುತ್ತಿದ್ದು, ಹಲವು ರೈತ ಸಂಘಟನೆಗಳು ರಾಷ್ಟ್ರವ್ಯಾಪಿ ಬಂದ್‍ಗೆ ಕರೆ ನಿಡಿದ್ದರು. ಅಲ್ಲದೆ ಪಂಜಾಬ್ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಈ ಪ್ರತಿಭಟನೆ ಕುರಿತು ಕಂಗನಾ ರಣಾವತ್ ಟ್ವೀಟ್ ಮಾಡಿ ಹೋರಾಟಗಾರರನ್ನು ಭಯೋತ್ಪಾದಕರಿಗೆ ಹೋಲಿಸಿದ್ದರು. ಹೀಗಾಗಿ ಅವರ ಟ್ವೀಟ್ ಕುರಿತು ಇದೀಗ ವಿವಾದ ಹುಟ್ಟಿಕೊಂಡಿದೆ, ಸಾಕಷ್ಟು ಚರ್ಚೆಯಾಗುತ್ತಿದೆ.

SCROLL FOR NEXT