ರಾಜ್ಯ

ಸ್ಯಾಂಡಲ್'ವುಡ್ ಡ್ರಗ್ಸ್ ನಂಟು ಪ್ರಕರಣ: ಕೇಂದ್ರೀಯ ಕಾರಾಗೃಹದಲ್ಲಿ ಎಲ್ಲಾ ಆರೋಪಿಗಳ ವಿಚಾರಣೆಗೊಳಪಡಿಸಿದ ಇಡಿ

Manjula VN

ಬೆಂಗಳೂರು: ಸ್ಯಾಂಡಲ್'ವುಡ್ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂದಿಸಿದಂತೆ ಬಂಧನಕ್ಕೊಳಗಾಗಿರುವ ಎಲ್ಲಾ ಆರೋಪಿಗಳನ್ನೂ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದಲ್ಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶನಿವಾರ ವಿಚಾರಣೆಗೊಳಪಡಿಸದರು. 

ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಸೇರಿದಂತೆ ಎಲ್ಲಾ ಆರೋಪಿಗಳನ್ನೂ ಅಧಿಕಾರಿಗಳು ನಿನ್ನೆ ವಿಚಾರಣೆ ನಡೆಸಿದ್ದಾರೆ. 

 ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) 2002ರ ಅಡಿಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ನಡೆಸಿದ್ದು, ಹಣ ಸಂಪಾದಿಸುವ ಸಲುವಾಗಿ ಡ್ರಗ್ಸ್ ಗಳನ್ನು ಬಳಕೆ ಮಾಡುತ್ತಿದ್ದರೇ..? ಹೀಗೆ ಗಳಿಸಿದ ಹಣವನ್ನು ಹವಾಲಾ ದಂಧೆಗೆ ಬಳಕೆ ಮಾಡಲಾಗಿತದ್ತೇ ಎಂಬುದರ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ, ಇಲ್ಲವರೆಗೆ ಪ್ರಾಥಮಿಕ ತನಿಖೆಯಲ್ಲಿ ಈ ಕುರಿತು ಯಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದು ಅಧಿಕೃತ ಮೂಲಗಳು ಮಾಹಿತಿ ನೀಡಿದೆ. 

ಸಂಘಟಿತ ಜಾಲಗಳು ಪ್ರಕರಣದಲ್ಲಿ ಭಾಗಿಯಾಗಿದ್ದು, ತನಿಖೆ ಸಾಕಷ್ಟು ಕ್ಲಿಷ್ಟಕರವಾಗಿದೆ. ಡ್ರಗ್ಸ್ ಪ್ರಕರಣ ದೇಶದ ಹೊರಗಿನವರೆಗೂ ವ್ಯಾಪಿಸಿದೆ. ಡ್ರಗ್ಸ್ ಮಾರಾಟಾಕ್ಕೆ ಕ್ರಿಪ್ಟೋಕರೆನ್ಸಿಯನ್ನು ಡಾರ್ಕ್ನೆಟ್ನಲ್ಲಿ ಬಳಕೆ ಮಾಡಲಾಗಿದೆ. ಪ್ರಕರಣಗಳಲ್ಲಿ ನಡೆದಿರುವ ಅಕ್ರಮ ಹಣ ವಹಿವಾಟು ಪತ್ತೆಹಚ್ಚುವುದು ದೊಡ್ಡ ಸವಾಲಿನ ಕೆಲಸವಾಗಿದೆ ಎಂದು ತಿಳಿಸಿದೆ. 

SCROLL FOR NEXT