ಸಂಗ್ರಹ ಚಿತ್ರ 
ರಾಜ್ಯ

ಕರ್ನಾಟಕದಲ್ಲಿ ಇಂದು 6,892 ಮಂದಿಗೆ ಕೊರೋನಾ ಪಾಸಿಟಿವ್, 59 ಬಲಿ

ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಇಂದು ದಾಖಲೆಯ 6,892 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 5,82,458ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಇಂದು ದಾಖಲೆಯ 6,892 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 5,82,458ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 59 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8,641ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2,772 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 2,23,569ಕ್ಕೆ ಏರಿಕೆಯಾಗಿದೆ.

ಇಂದು 7,509 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 4,69,750ಕ್ಕೆ ಏರಿಕೆಯಾಗಿದೆ. 1,04,048 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Video

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ