ರಾಜ್ಯ

ಕಾಂಗ್ರೆಸ್ ಹಿರಿಯ ಶಾಸಕ ಎಚ್.ಕೆ. ಪಾಟೀಲ್ ಗೆ ಕೊರೊನಾ ಸೋಂಕು ದೃಢ 

Nagaraja AB

ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

 ಈ ಬಗ್ಗೆ ಸ್ವತಃ ಟ್ವೀಟ್ ಮಾಡಿರುವ ಪಾಟೀಲ್, ಕೊರೊನಾ ಪರೀಕ್ಷೆ ನಡೆಸಿದಾಗ ಕೊರೊನಾ ಪಾಟಿಸಿವ್ ಬಂದಿದೆ. ಆದರೆ ಯಾವುದೇ ಲಕ್ಷಣಗಳಿಲ್ಲ ಎಂದು ತಿಳಿಸಿದ್ದಾರೆ.

10 ದಿನ ಸ್ವಯಂ ಕ್ವಾರಂಟೈನ್ ನಲ್ಲಿದ್ದೇನೆ. ನಿಮ್ಮ ಹಾರೈಕೆಯಿಂದ ಬೇಗ ಗುಣಮುಖನಾಗುತ್ತೇನೆ. ನನ್ನೊಂದಿಗೆ ಕೆಲವು ದಿನಗಳಿಂದ ಸಂಪರ್ಕ ಹೊಂದಿದ್ದವರು ಪರೀಕ್ಷೆ ಮಾಡಿಸಿಕೊಳ್ಳಬೇಕು ಮತ್ತು ಮುಂಜಾಗೃತಾ ಕ್ರಮ ಕೈಗೊಳ್ಳಬೇಕು ಎಂದು ಪಾಟೀಲ್ ಮನವಿ ಮಾಡಿದ್ದಾರೆ.

SCROLL FOR NEXT