ಅಪಘಾತಕ್ಕೀಡಾದ ಸ್ಕೂಟರ್ ಮತ್ತು ಟ್ಯಾಂಕರ್ ವಾಹನ 
ರಾಜ್ಯ

ಯಲ್ಲಾಪುರ: ಸ್ಕೂಟರ್- ಟ್ಯಾಂಕರ್ ಡಿಕ್ಕಿ: ತಂದೆ, ಮಗಳ ಸಾವು

ಸ್ಕೂಟರ್, ಗ್ಯಾಸ್ ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಮಂಗಳವಾರ ಸಂಭವಿಸಿದೆ.

ಕಾರವಾರ: ಸ್ಕೂಟರ್, ಗ್ಯಾಸ್ ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಮಂಗಳವಾರ ಸಂಭವಿಸಿದೆ.

ವಿನೋದ್ ಕಿಂದಳಕರ್ (56) ಹಾಗೂ ಅವರ ಮಗಳು ಸುನೇಹಾ ಕಿಂದಳಕರ್ (12) ಮೃತ ದುರ್ದೈವಿಗಳು. ಮೃತ ವಿನೋದ್ ಕಿಂದಳಕರ್ ಅವರು ಯಲ್ಲಾಪುರದ ಅಗ್ನಿಶಾಮಕ ದಳ ಠಾಣೆಯಲ್ಲಿ ಪ್ರಮುಖ ಅಗ್ನಿಶಾಮಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ವಿನೋದ್ ಕಿಂದಳಕರ್, ಮಗಳನ್ನು ಯಲ್ಲಾಪುರದಿಂದ ತಮ್ಮ ಊರಾದ ಅಂಕೋಲಾ ತಾಲೂಕಿನ ಹಾರವಾಡಾಕ್ಕೆ ಬಿಡಲು ಹೊರಟಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ  ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT