ರಾಜ್ಯ

ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯಗೆ ಕೊರೋನಾ ದೃಢ

Raghavendra Adiga

ಬೆಂಗಳೂರು: ಹೊನ್ನಾಳಿ ಶಾಸಕ, ಎಂಪಿ ರೇಣುಕಾಚಾರ್ಯ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಶಾಸಕರು ಬೆಂಗಳೂರು ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರೇಣುಕಾಚಾರ್ಯ ಅವರು ಇದುವರೆಗೆ ಹತ್ತು ಬಾರಿ ಕೊರೋನಾ ಟೆಸ್ಟ್ ಮಾಡಿಸಿಕೊಂಡಿದ್ದು ಇದೀಗ ಪಾಸಿಟಿವ್ ವರದಿ ಬಂದಿದೆ.

ಈ ಬಗ್ಗೆ ಸ್ವತಃ ಶಾಸಕ ರೇಣುಕಾಚಾರ್ಯ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

"ಇಂದು ಬೆಳಗ್ಗೆ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ 10ನೇ ಬಾರಿಗೆ ಕೋವಿಡ್ ಪರೀಕ್ಷೆ ಮಾಡಿಸಿದ್ದು, ವರದಿ ಕೊರೊನಾ ಪಾಸಿಟಿವ್ ಬಂದಿದೆ.

"ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದ ಎಲ್ಲಾರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ." ಎಂದು ಅವರು ಹೇಳಿದ್ದಾರೆ.

SCROLL FOR NEXT