ರಾಜ್ಯ

ಮೋಟಾರು ವಾಹನ ತೆರಿಗೆ ಇಳಿಕೆ: ಲಕ್ಷ್ಮಣ ಸವದಿ‌

Lingaraj Badiger

ಬೆಂಗಳೂರು: ರಾಜ್ಯದಲ್ಲಿನ 13 ರಿಂದ 20 ಆಸನ ಸಾಮರ್ಥ್ಯವುಳ್ಳ ಒಪ್ಪಂದ ವಾಹನಗಳಿಗೆ ಪ್ರತಿ ಆಸನಕ್ಕೆ ನಿಗದಿಪಡಿಸಿರುವ 900 ರೂಪಾಯಿಗಳ ಮೋಟಾರು ವಾಹನ ತೆರಿಗೆಯನ್ನು 700 ರೂಪಾಯಿಗೆ ಇಳಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಮೋಟಾರು ವಾಹನಗಳ ತೆರಿಗೆಯನ್ನು ಇಳಿಸಬೇಕೆಂದು ಹಲವಾರು ವಾಹನ ಮಾಲೀಕರು, ವಿವಿಧ ಸಂಘಟನೆಗಳು ಸಲ್ಲಿಸಿದ್ದ ಬೇಡಿಕೆಗೆ ಸ್ಪಂದಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕ ಮೋಟಾರು ವಾಹನಗಳ ತೆರಿಗೆ ಅಧಿನಿಯಮ 1957 ರ‌ಕರ್ನಾಟಕ ಕಾಯ್ದೆ 35/1957) ಕಲಂ 16(1) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಮೋಟಾರು ವಾಹನಗಳ ಅಧಿನಿಯಮ 1957ರ ಷೆಡ್ಯೂಲ್ (ಎ) ಐಟಂ ಸಂಖ್ಯೆ: 5(ಎ)(iii) ರಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಡಿಸಿಎಂ ತಿಳಿಸಿದ್ದಾರೆ.

SCROLL FOR NEXT