ರಹಮಾನ್ 
ರಾಜ್ಯ

ಪವರ್ ಸುದ್ದಿ ವಾಹಿನಿ ಪ್ರಸಾರ ಬಂದ್: ಫೇಸ್‌ಬುಕ್ ಲೈವ್‌ನಲ್ಲಿ ಕಣ್ಣೀರಿಟ್ಟ ರಹಮಾನ್

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಮಾಡಿದ್ದಾರೆ ಎನ್ನಲಾದ ಭ್ರಷ್ಟಾಚಾರದ ಬಗ್ಗೆ ವರದಿ ಮಾಡಿದ್ದ ಕನ್ನಡ ಸುದ್ದಿ ವಾಹಿನಿ ಪವರ್ ಟಿವಿಯನ್ನು ಬಂದ್ ಮಾಡಿರುವುದಕ್ಕೆ ನಿರೂಪಕ ರೆಹಮಾನ್ ಹಾಸನ್ ಫೇಸ್‌ಬುಕ್ ಲೈವ್‌ನಲ್ಲಿ ಕಣ್ಣೀರಿಟ್ಟಿದ್ದಾರೆ. 

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಮಾಡಿದ್ದಾರೆ ಎನ್ನಲಾದ ಭ್ರಷ್ಟಾಚಾರದ ಬಗ್ಗೆ ವರದಿ ಮಾಡಿದ್ದ ಕನ್ನಡ ಸುದ್ದಿ ವಾಹಿನಿ ಪವರ್ ಟಿವಿಯನ್ನು ಬಂದ್ ಮಾಡಿರುವುದಕ್ಕೆ ನಿರೂಪಕ ರೆಹಮಾನ್ ಹಾಸನ್ ಫೇಸ್‌ಬುಕ್ ಲೈವ್‌ನಲ್ಲಿ ಕಣ್ಣೀರಿಟ್ಟಿದ್ದಾರೆ.

ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದ ರಹಮಾನ್ ಅವರು ಪವರ್ ಟಿವಿ ಮೇಲೆ ಸಿಸಿಬಿ ಪೊಲೀಸರು ರೇಡ್ ಮಾಡಿದ್ದಾರೆ. ಅವರಿಗೆ ಬೇಕಾದ ಎಲ್ಲಾ ದಾಖಲೆಗಳನ್ನು ಪಡೆದಿದ್ದಾರೆ. ಚಾನಲ್ ಬಂದ್ ಮಾಡಿದ್ದು ನಮ್ಮ ಫೇಸ್ ಬುಕ್ ಲೈವನ್ನು ಬಂದ್ ಮಾಡಿದ್ದಾರೆ. ಇದರಿಂದ 250ಕ್ಕೂ ಉದ್ಯೋಗಿಗಳ ಕುಟುಂಬ ಬೀದಿಗೆ ಬಂದಿವೆ ಎಂದು ಹೇಳಿದ್ದಾರೆ. 

ಪವರ್ ಟಿವಿ ಮೂಲಕ ಸತ್ಯಕ್ಕಾಗಿ ನಾವು ಧ್ವನಿಯೆತ್ತಿದ್ದೇವೆ. ವಿಜಯೇಂದ್ರ ವಿರುದ್ಧ ಧ್ವನಿಯೆತ್ತುವುದನ್ನು ನಿಲ್ಲಿಸುವುದಿಲ್ಲ. ಇವತ್ತು ನಮ್ಮ ಕುಟುಂಬಗಳನ್ನು ಬೀದಿಗೆ ತಂದಿದ್ದೀರಿ. ನಿಮಗೇನು ಮಾಡಿದ್ದೇವೆ ಎಂದು ರೆಹಮಾನ್ ಕಣ್ಣೀರಿಟ್ಟಿದ್ದಾರೆ.

ಇನ್ನು ಪವರ್ ಟಿವಿ ವಾಹಿನಿ ಲೈವ್ ಬಂದ್ ಮಾಡಿರುವುದು ಸರಿಯಾದ ಕ್ರಮವಲ್ಲ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮುಖ್ಯಮಂತ್ರಿಗೆ ಪತ್ರ ಬರೆದು ತಿಳಿಸಿದ್ದಾರೆ.

ಇದೇ ಟಿವಿ ಮಾಲೀಕರ ಮೇಲೆ ಆರೋಪ ಬೇರೆ ವಿಚಾರ. ಈ ಬಗ್ಗೆ ತನಿಖೆ ನಡೆಸುವುದಕ್ಕೆ ಅಭ್ಯಂತರವಿಲ್ಲ. ಆದರೆ, ಒಂದು ಟಿವಿ ವಾಹಿನಿ ಲೈವ್ ಬಂದ್ ಮಾಡುವುರಿಂದ ಅದನ್ನು ಅವಲಂಬಿಸಿ ವೃತ್ತಿ ಮಾಡುತ್ತಿರುವ ನೂರಾರು ಪತ್ರಕರ್ತರ ಕುಟುಂಬಗಳು ಬೀದಿಗೆ ಬರುತ್ತವೆ. ಆದ್ದರಿಂದ ತಾವು ಈ ಕೂಡಲೇ ಗೃಹ ಸಚಿವರಿಗೆ ನಿರ್ದೇಶನ ನೀಡಿ, ಪವರ್ ಟಿವಿ ವಾಹಿನಿ ಲೈವ್ ಬಂದ್ ತೆರವು ಮಾಡಿಸಿ, ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ಶಿವಾನಂದ ತಗಡೂರು ಪತ್ರದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz closure: ಹಾರ್ಮುಜ್ ಜಲಸಂಧಿ ಬಂದ್, ಏಷ್ಯಾದ ಬಂದರುಗಳಲ್ಲಿ ಕ್ಯೂನಲ್ಲಿ ನಿಂತ ಹಡಗುಗಳು!

ಪದೇ ಪದೇ ಇರಾನ್ ದಾಳಿ: ಅಬುದಾಬಿಯಲ್ಲಿ ಕ್ಷಿಪಣಿ ಅವಶೇಷಗಳು ಬಿದ್ದು, ಭಾರತೀಯ ಪ್ರಜೆ ಸೇರಿದಂತೆ ಇಬ್ಬರು ಸಾವು!

ರಾಜ್ಯ ಸರ್ಕಾರ ನಿಯಮದ ಮಿತಿಯೊಳಗೆ ಸಾಲ ಮಾಡಿದೆ: ಸಿಎಂ ಸಿದ್ದರಾಮಯ್ಯ ಸಮರ್ಥನೆ

ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಕಣದಲ್ಲಿ 34 ಅಭ್ಯರ್ಥಿಗಳು, 80 ಲಕ್ಷ ನಗದು, 1.74 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ

ಹೆಚ್ಚುತ್ತಿರುವ ಸಬ್ಸಿಡಿ: ಗ್ರಾಮ ಪಂಚಾಯಿತಿ ಅನುದಾನಕ್ಕೆ ರಾಜ್ಯ ಸರ್ಕಾರ ಕೊಕ್- CAG ವರದಿ

SCROLL FOR NEXT