ರಾಜ್ಯದಲ್ಲಿ 6 ಲಕ್ಷ ಗಡಿ ದಾಟಿದ ಕೊರೋನಾ, ಇಂದು 8,856 ಮಂದಿಗೆ ಸೋಂಕು
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಆರು ಲಕ್ಷದ ಗಡಿ ದಾಟಿದೆ. ಇಂದು ಹೊಸದಾಗಿ 8,856 ಮಂದಿಗೆ ಸೋಂಕು ತಗುಲಿರುಲಿರುವುದು ಖಾತ್ರಿಯಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಆರು ಲಕ್ಷದ ಗಡಿ ದಾಟಿದೆ. ಇಂದು ಹೊಸದಾಗಿ 8,856 ಮಂದಿಗೆ ಸೋಂಕು ತಗುಲಿರುಲಿರುವುದು ಖಾತ್ರಿಯಾಗಿದೆ.
ಇದುವರೆಗೆ ರಾಜ್ಯದಲಿ ಕೊರೋನಾ ಸೋಂಕಿಗೆ ತುತ್ತಾದವರ ಸಂಖ್ಯೆ 6,01,767ಕ್ಕೆ ತಲುಪಿದೆ.
ಈ ಮಧ್ಯೆ ಇಂದು 8,890 ಮಂದಿ ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.
ರಾಜ್ಯದಲ್ಲಿಂದು 87 ಮಂದಿ ಮಹಾಮಾರಿ ಕೊರೋನಾಗೆ ಬಲಿಯಾಗಿದ್ದು ಬೆಂಗಳೂರು ನಗರದಲ್ಲಿ ಇಂದು 4,226 ಪ್ರಕರಣಗಳು ವರದಿಯಾಗಿದ್ದು 24 ಮಂದಿ ಮೃತಪಟ್ಟಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.