ರಾಜ್ಯ

ರಾಜ್ಯದಲ್ಲಿ ಕೊರೋನಾ ಅಟ್ಟಹಾಸ: ಇಂದು 46 ಬಲಿ, ಬೆಂಗಳೂರಿನಲ್ಲಿ 5,576 ಸೇರಿ 7,955 ಮಂದಿಗೆ ಪಾಸಿಟಿವ್

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಮುಂದುವರೆದಿದ್ದು, ಶುಕ್ರವಾರ ಬರೋಬ್ಬರಿ 7,955 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,48,085ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 46 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,813ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 5,576 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,70,014ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 29 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 3220 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,77,169ಕ್ಕೆ ಏರಿಕೆಯಾಗಿದೆ. ಇನ್ನು 58,084 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 378 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

SCROLL FOR NEXT