ರಾಜ್ಯ

ರಾಜ್ಯದಲ್ಲಿ ಕೊರೋನಾ ಸ್ಫೋಟ: ಇಂದು 36 ಬಲಿ, ಬೆಂಗಳೂರಿನಲ್ಲಿ 4,384 ಸೇರಿ 6,955 ಮಂದಿಗೆ ಪಾಸಿಟಿವ್

Vishwanath S

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಮುಂದುವರೆದಿದ್ದು, ಶನಿವಾರ ಬರೋಬ್ಬರಿ 6,955 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,55,040ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 36 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,849ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 4,384 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,74,398ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 19 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 3,350 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,80,519ಕ್ಕೆ ಏರಿಕೆಯಾಗಿದೆ. ಇನ್ನು 61,653 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 405 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

SCROLL FOR NEXT