ರಾಜ್ಯ

6-9ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಾಂಕನ ಪರೀಕ್ಷೆ ಬಗ್ಗೆ ಶೀಘ್ರದಲ್ಲಿ ನಿರ್ಧಾರ: ಸಚಿವ ಸುರೇಶ್ ಕುಮಾರ್

Manjula VN

ಚಿತ್ರದುರ್ಗ: 6 ರಿಂದ 9ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಾಂಕನ ಪರೀಕ್ಷೆ ಬಗ್ಗೆ ಶೀಘ್ರದಲ್ಲಿ ನಿರ್ಧಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 6 ರಿಂದ 9 ನೇ ತರಗತಿಯ ವಿದ್ಯಾರ್ಥಿಗಳ ಮೌಲ್ಯಾಂಕನ ಪರೀಕ್ಷೆಯು ಅವರ ಜ್ಞಾನದ ಮಟ್ಟವನ್ನು ಅಳೆಯಲು ನಡೆಸಲಾಗುತ್ತದೆ. ಈ ಕುರಿತು ಯುಗಾದಿ ಹಬ್ಬದ ಬಳಿಕ ಇಲಾಖೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲಿದೆ. ಮೌಲ್ಯಾಂಕನ ಪರೀಕ್ಷೆಯನ್ನು ಆನ್‌ಲೈನ್ ಅಥವಾ ಆಫ್‌ಲೈನ್ ನಲ್ಲಿ ಯಾವುದರಲ್ಲಿ ನಡೆಸಲಾಗುತ್ತದೆ ಎಂಬುದನ್ನು ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. 

ಕೋವಿಡ್ ಹಿನ್ನೆಲೆಯಲ್ಲಿ 2020-21ನೇ ಸಾಲಿಗೆ 6 ರಿಂದ 9ನೇ ತರಗತಿಗಳಿಗೆ ಮೌಲ್ಯಾಂಕನ ಪರೀಕ್ಷೆ ವೇಳಾಪಟ್ಟಿ ಹಾಗೂ ಶೈಕ್ಷಣಿಕ ಅವಧಿ ನಿಗದಿಪಡಿಸುವ ಕುರಿತು ಇಲಾಖೆಯ ಅಧಿಕಾರಿಗಳು, ಶಿಕ್ಷಣ ತಜ್ಞರು, ಖಾಸಗಿ ಶಾಲಾ ಸಂಸ್ಥೆಗಳು, ಪೋಷಕರ ಸಂಘಟನೆಗಳ ಪ್ರತಿನಿಧಿಗಳು ಹಾಗೂ ವಿವಿಧ ಶಿಕ್ಷಕರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದೆ. 

ಸಭೆಯಲ್ಲಿ ಖಾಸಗಿ ಶಾಲೆಗಳ ಪ್ರತಿನಿಧಿಗಳು, ಪೋಷಕರು, ಶಿಕ್ಷಕರ ಸಂಘಟನೆಗಳ ಪ್ರತಿನಿಧಿಗಳು ಪರೀಕ್ಷೆ ನಡೆಸುವ ಕುರಿತು ಪ್ರತಿಯೊಬ್ಬರೂ ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಬಹುಪಾಲು ಪ್ರತಿನಿಧಿಗಳು ಯಾವುದಾದರೂ ಮಾದರಿಯ ಮೌಲ್ಯಮಾಪನ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಒಳ್ಳೆಯದೆಂದು ಅಭಿಪ್ರಾಯಪಟ್ಟಿದ್ದಾರೆ. ಕೆಲವರು ಪರೀಕ್ಷೆ ನಡೆಸದೆ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆಂದು ತಿಳಿಸಿದ್ದಾರೆ. 

SCROLL FOR NEXT