ರಾಜ್ಯ

ರಾಜ್ಯದಲ್ಲಿ ಕೊರೋನಾ ಅಟ್ಟಹಾಸ: ಇಂದು 10 ಸಾವಿರ ಗಡಿ ದಾಟಿದ ಪ್ರಕರಣ, ಬೆಂಗಳೂರಿನಲ್ಲೇ 7,584 ಸೋಂಕು ಪತ್ತೆ!

Vishwanath S

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಭಾನುವಾರ ಬರೋಬ್ಬರಿ 10,250 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,65,290ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 40 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,889ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 7,584 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,81,982ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 27 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 2,638 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,83,157ಕ್ಕೆ ಏರಿಕೆಯಾಗಿದೆ. ಇನ್ನು 69,225 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 440 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

SCROLL FOR NEXT