ಮಂಗ್ಲಿ(ಸತ್ಯವತಿ ರಾಥೋಡ್) 
ರಾಜ್ಯ

ಮಸ್ಕಿ ವಿಧಾನಸಭೆ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಪರ ತೆಲುಗು ಗಾಯಕಿ 'ಮಂಗ್ಲಿ' ಪ್ರಚಾರ

ಏಪ್ರಿಲ್ 13ರಂದು ಮಸ್ಕಿಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಪರವಾಗಿ ಪ್ರಚಾರ ಮಾಡಲು ಗಾಯಕಿ ಮಂಗ್ಲಿ ಆಗಮಿಸುತ್ತಿದ್ದಾರೆ.

ರಾಯಚೂರು: ಏಪ್ರಿಲ್ 13ರಂದು ಮಸ್ಕಿಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಪರವಾಗಿ ಪ್ರಚಾರ ಮಾಡಲು ಗಾಯಕಿ ಮಂಗ್ಲಿ ಆಗಮಿಸುತ್ತಿದ್ದಾರೆ. ಈಗಾಗಲೇ ಹಲವು ಸಚಿವರು, ರಾಜ್ಯದ ವಿವಿಧ ಭಾಗಗಳ ಕಾರ್ಯಕರ್ತರು ಮಸ್ಕಿಯಲ್ಲಿ ಪ್ರಚಾರ ನಡೆಸುತ್ತಿದ್ದಾರೆ. 

ಮಸ್ಕಿಯಲ್ಲಿ ಕಾಂಗ್ರೆಸ್‌ನಿಂದ ಆರ್‌. ಬಸನಗೌಡ ತುರ್ವಿಹಾಳ, ಬಿಜೆಪಿಯಿಂದ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅಭ್ಯರ್ಥಿಗಳು. ಜೆಡಿಎಸ್ ಪಕ್ಷ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಪೈಪೋಟಿ ಇದೆ.

ಮಧ್ಯಾಹ್ನ 3 ಗಂಟೆಗೆ ಅಡವಿಭಾವಿ‌ ತಾಂಡಾ, 4.30ಕ್ಕೆ ಹಡಗಲಿ ತಾಂಡಾ ಹಾಗೂ ಸಂಜೆ 5.30ಕ್ಕೆ ಮಸ್ಕಿ ಪಟ್ಟಣದಲ್ಲಿ ಮತಯಾಚನೆ ಮಾಡಲಿದ್ದಾರೆ. ತೆಲುಗು ಭಾಷೆಯಲ್ಲಿ ಬಿಡಿಗಡೆಯಾದ ಕನ್ನಡದ 'ರಾಬರ್ಟ್' ಸಿನಿಮಾದಲ್ಲಿ 'ಕಣ್ಣೇ ಅದಿರಿಂದಿ..' ತೆಲುಗು ಹಾಡಿರುವುದು ಎರಡೂ ರಾಜ್ಯಗಳಲ್ಲೂ ವೈರಲ್ ಆಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT