ರಾಜ್ಯ

ಬೆಂಗಳೂರು: ಕಾಲಿಗೆ ಗುಂಡು ಹಾರಿಸಿ ಜೋಡಿ ಕೊಲೆ ಆರೋಪಿಯನ್ನು ಬಂಧಿಸಿದ ಪೊಲೀಸರು

Srinivasamurthy VN

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಪೊಲೀಸರ ಗನ್ ಸದ್ದು ಮಾಡಿದ್ದು, ಕಾಲಿಗೆ ಗುಂಡು ಹಾರಿಸಿ ಪೊಲೀಸರು ಜೋಡಿ ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಜೆಪಿನಗರದಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ಮಂಜುನಾಥ್ ಅಲಿಯಾಸ್ ಅಂಬಾರಿ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆರೋಪಿ ಮಂಜುನಾಥ್ ಕಾಲಿಗೆ ಇನ್ಸ್‌ಪೆಕ್ಟರ್ ಕಿಶೋರ್‌ ಫೈರಿಂಗ್ ಮಾಡಿ ಆತನನ್ನು ಸೆರೆ  ಹಿಡಿದಿದ್ದಾರೆ,

ಮನೆಯಲ್ಲಿ ಇದ್ದ ಹಣ ಮೊಬೈಲ್, ಚಿನ್ನಾಭರಣವನ್ನು ದೋಚುವ ಸಲುವಾಗಿ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಡಬಲ್ ಮರ್ಡರ್ ಮಾಡಿದ್ದ ಕೇಸ್ ಸಂಬಂಧ ಆರೋಪಿ ಮಂಜುನಾಥ್ ಅಲಿಯಾಸ್ ಅಂಬಾರಿ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆ ದಾಳಿ ಮಾಡಿ ಆರೋಪಿ ಪರಾರಿಗೆ  ಯತ್ನಿಸಿದ್ದಾನೆ. ಶರಣಾಗುವಂತೆ ಸೂಚಿಸಿದರೂ ಪರಾರಿಗೆ ಯತ್ನಿಸಿದ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್ ಕಿಶೋರ್‌ ಆರೋಪಿ ಕಾಲಿಗೆ ಗುಂಡು ಹಾರಿಸಿ ಆತನನ್ನು ಬಂಧಿಸಿದ್ದಾರೆ. ಸದ್ಯ ಆರೋಪಿ ಮಂಜುನಾಥ್‌ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ಕೇಸ್  ದಾಖಲಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಏಪ್ರಿಲ್ 7 ರಂದು ಜೆಪಿ ನಗರದ 7 ನೇ ಹಂತದಲ್ಲಿನ ಮನೆಯಲ್ಲಿ ಮಮತಾ ಬಸು ಮತ್ತು ದೇವ ವ್ರಥಾ ಮೆಹರಾ(41) ಎಂಬುವವರ ಮೇಲೆ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು.  

SCROLL FOR NEXT