ಯಶ್ 
ರಾಜ್ಯ

ಎಲ್ಲಿದ್ದೀರಿ, ನಮ್ಮ ಪರ ದನಿಯೆತ್ತಿರಿ: ನಟ ಉಪೇಂದ್ರ, ಯಶ್ ಗೆ ಸಾರಿಗೆ ನೌಕರರ ಮನವಿ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಒಂದು ವಾರದಿಂದ ಅನಿರ್ಧಿಷ್ಟಾವಧಿ ಮುಷ್ಕರದಲ್ಲಿ ತೊಡಗಿರುವ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ಚಾಲಕರು, ತಮ್ಮ ಪರ ದನಿಯೆತ್ತುವಂತೆ ನಟ ಯಶ್ ಹಾಗೂ ಉಪೇಂದ್ರ ಅವರಲ್ಲಿ ಮನವಿ ಮಾಡಿದ್ದಾರೆ. 

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಒಂದು ವಾರದಿಂದ ಅನಿರ್ಧಿಷ್ಟಾವಧಿ ಮುಷ್ಕರದಲ್ಲಿ ತೊಡಗಿರುವ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ಚಾಲಕರು, ತಮ್ಮ ಪರ ದನಿಯೆತ್ತುವಂತೆ ನಟ ಯಶ್ ಹಾಗೂ ಉಪೇಂದ್ರ ಅವರಲ್ಲಿ ಮನವಿ ಮಾಡಿದ್ದಾರೆ. 

"ಸ್ವತಃ ಬಸ್ ಚಾಲಕನ ಪುತ್ರನಾದ ಯಶ್ ಗೆ ಚಾಲಕ, ನಿರ್ವಾಹಕರ ಸಂಕಷ್ಟದ ಅರಿವಿರುತ್ತದೆ. ಹೀಗಾಗಿ ಅವರು ನಮ್ಮ ಪರ ದನಿಯೆತ್ತಬೇಕು" ಎಂದು ಆಗ್ರಹಿಸಿದ್ದಾರೆ. ಅಲ್ಲದೆ, "ನಟ ಉಪೇಂದ್ರ ಅವರು ಆಟೋ ಚಿಹ್ನೆ ಬಳಸಿಕೊಂಡು ಪ್ರಜಾಕೀಯ ಪಕ್ಷ ಸ್ಥಾಪಿಸಿದ್ದಾರೆ. ಆದಾಗ್ಯೂ ಚಾಲಕ, ನಿರ್ವಾಹಕರ ಅಳಲಿಗೆ ಓಗೊಡದೆ ಸುಮ್ಮನಿರುವುದೇಕೆ" ಎಂದು ಪ್ರಶ್ನಿಸಿದ್ದಾರೆ. ಇದೇ ವೇಳೆ ನಟ ಯಶ್ ಗೆ ಬರೆದಿದದಾರೆ ಎನ್ನಲಾಗಿರುವ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಪತ್ರದಲ್ಲಿ ಯಾವುದೇ ಸಂಘಟನೆಯ ಅಧಿಕೃತ ಮುದ್ರೆ, ಸಹಿ, ದಿನಾಂಕ ಇಲ್ಲ. ಆದರೆ, ಯಶ್ ಅವರ ತಂದೆ ಸಹ ಬಿಎಂಟಿಸಿ ನಿವೃತ್ತ ನೌಕರರಾಗಿರುವ ಕಾರಣ ಈ ಪತ್ರ ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಪ್ರಾಮುಖ್ಯತೆ ಪಡೆದುಕೊಳ್ಳುತ್ತಿದೆ. 

“ಯುಗಾದಿ ಹಬ್ಬದ ಶುಭಾಷಯ ಕೋರುತ್ತಾ, ಒಂದು ವಾರದಿಂದ ಕರ್ನಾಟಕದಲ್ಲಿ ಹಲವು ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಟರವು ಸರ್ಕಾರದ ಹಠಮಾರಿ ಧೋರಣೆಯಿಂದ ತೀವ್ರ ಸ್ವರೂಪಕ್ಕೆ ತಿರುಗಿದ್ದು, ಸಾರಿಗೆ ನೌಕರರು ಕುಟುಂಬ ಸಮೇತರಾಗಿ ಬೀದಿಗಿಳಿದು ಹೋರಾಟ ಮಾಡುತ್ತಿರುವ ವಿಷಯ ನಿಮಗೆ ತಿಳಿಯದಾದುದೇನಲ್ಲ. ಹೀಗಿರುವಾಗ, ಸಾರಿಗೆ ನೌಕರ ಕುಟುಂಬದ ಹಿನ್ನೆಲೆ ಇರುವ, ಇಲ್ಲಿನ ನೌಕರರ ಪಾಡು-ಬದುಕು-ಬವಣೆಗಳ ಬಗೆಗೆ ಚಾಲಕರಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಘೋಷಿಸಿರುವ ಹಾಗೂ ನಮಗೆ ಹಿರಿಯ ಸಿಬ್ಬಂದಿಯೂ ಆಗಿದ್ದ ನಿಮ್ಮ ತಂದೆಯವರು ಅವರ ಅನುಭವವನ್ನು ನಿಮ್ಮೊಡನೆ ಹಂಚಿಕೊಂಡಿರಬಹುದು. 

ಪ್ರಯತ್ನ-ಪರಿಶ್ರಮ ಫಲವಾಗಿ ಚಲನಚಿತ್ರರಂಗದಲ್ಲಿ ರಾಕಿಂಗ್ ಸ್ಟಾರ್ ಆಗಿ ಜನಮಾನಸದಲ್ಲಿ ರಾರಾಜಿಸುತ್ತಿರುವ ತಾವು ಸಮಾಜ ಸೇವೆಯಲ್ಲೂ ಹಿಂದೆ ಬಿದ್ದಿಲ್ಲವೆಂಬುದು ನಮಗೆ ಹೆಮ್ಮೆಯ ವಿಷಯ. ಆದರೀಗ, ಸಾರಿಗೆ ನೌಕರರು ನಿರಂತರವಾಗಿ ತಮ್ಮ ಮೇಲಾಗುತ್ತಿರುವ ತಾರತಮ್ಯ ದೌರ್ಜನ್ಯ-ದಬ್ಬಾಳಿಕೆಗಳಿಂದ ಬೇಸತ್ತು ಹೋರಾಟಕ್ಕೆ ಕುಟುಂಬ ಸಮೇತರಾಗಿ ಬೀದಿಗಿಳಿದಿದ್ದಾರೆ. ಹೃದಯಹೀನ ಸರ್ಕಾರ ತನ್ನ ಹಠಮಾರಿ ಧೋರಣೆಯಿಂದ ಸೇವೆ ಮಾಡುವ ಕೈಗಳನ್ನು ಭಿಕ್ಷೆ ಬೇಡುವಂತೆ ಮಾಡಿದೆ. ಇದೂ ನಿಮಗೆ ತಿಳಿದಿರಬಹುದು. 

ಕಾನೂನಿನ ಚೌಕಟ್ಟಿನಲ್ಲಿ ಮುಷ್ಕರದ ಮೊರೆ ಹೋಗಿರುವ ನಾವು ಇಂತಹ ಸಂಕಷ್ಟದ ಸಮಯದಲ್ಲಿ ನಿಮ್ಮಿಂದ ಬೆಂಬಲ ನಿರೀಕ್ಷಿಸಬಹುದೇ? ನಿಮ್ಮ ಏಳಿಗೆಯನ್ನು ಹೆಮ್ಮೆಯಿಂದ ಸಂಭ್ರಮಿಸುವ ನಾವು, ನಿಮ್ಮ ಬೆಂಬಲವೂ ನಮ್ಮ ಹೋರಾಟಕ್ಕೆ ಧನಾತ್ಮಕ ಪರಿಣಾಮ ಬೀರಬಹುದೆಂಬ ನಂಬಿಕೆ ಹೊಂದಿದ್ದೇವೆ ಹಾಗೂ ನಿಮ್ಮ ಬೆಂಬಲ ನಿರೀಕ್ಷೆಯಲ್ಲಿ ಆಸೆಗಣ್ಣಿಂದ ಕಾಯುತ್ತಿರುತ್ತೇವೆ" ಎಂದು ಪತ್ರದಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT