ರಾಜ್ಯ

ಅಂಬೇಡ್ಕರ್ ಸಮಾನತೆಯ ನಿಜವಾದ ಹೋರಾಟಗಾರ, ಸಮಸ್ತ ಶೋಷಿತರ ಧ್ವನಿ: ಸಂಸದ ಎ ನಾರಾಯಣಸ್ವಾಮಿ

Shilpa D

ಚಿತ್ರದುರ್ಗ: ಡಾ.ಬಿ.ಆರ್‌.ಅಂಬೇಡ್ಕರ್ ಅವರು ದೇಶದ ಸಮಸ್ತ ಶೋಷಿತ ಸಮುದಾಯದ ಧ್ವನಿಯಾಗಿದ್ದರು, ಅವರು ಸಮಾನತೆಯ ನಿಜವಾದ ಹೋರಾಟಗಾರ ಅವರನ್ನು ಪಡೆದಿದ್ದು ದೇಶದ ಸೌಭಾಗ್ಯ ಎಂದು ಸಂಸದ ಎ.ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.

ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠದಲ್ಲಿ ಏರ್ಪಡಿಸಿದ್ದ ಅಂಬೇಡ್ಕರ್‌ ಜಯಂತಿಯಲ್ಲಿ ಅವರು ಮಾತನಾಡಿದರು. ‘ಅಂಬೇಡ್ಕರ್‌ ಜನಿಸದೇ ಇದ್ದಿದ್ದರೆ ದೇಶದ ಬಹುಪಾಲು ಜನರ ಸ್ಥಿತಿ ಊಹಿಸಲು ಅಸಾಧ್ಯವಾಗಿತ್ತು. ನಾನು ಶಾಸಕ, ಸಚಿವ, ಸಂಸದನಾಗಿದ್ದಕ್ಕೆ ಅಂಬೇಡ್ಕರ್‌ ಕಾರಣ’ ಎಂದು ಹೇಳಿದರು.

ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕು ಎಂಬುದು ಡಾ.ಬಿ.ಆರ್.ಅಂಬೇಡ್ಕರ್‌ ಅವರ ಆಶಯವಾಗಿತ್ತು , ‘ಸಾಮಾಜಿಕ ಸಮಾನತೆಗಾಗಿ ಶ್ರಮಿಸಿದ ಮಹಾನ್‌ ಹೋರಾಟಗಾರ ಅಂಬೇಡ್ಕರ್‌. ಅಸ್ಪೃಶ್ಯತೆಯನ್ನು ತೊಲಗಿಸಲು ಹೋರಾಟ ಮಾಡಿದರು. ದಲಿತರ ಧ್ವನಿಯಾಗಿದ್ದರು’ ಎಂದು ಕೊಂಡಾಡಿದರು. ಶಾಸಕನಾಗಿದ್ದ ನಾನು ಸಂಸದನಾಗಲು ಅಂಬೇಡ್ಕರ್ ಅವರೇ ಕಾರಣ ಎಂದು ಹಾಡಿ ಹೊಗಳಿದರು. ಸಮಾಜದಲ್ಲಿ ಎಲ್ಲಾ ವರ್ಗದವರಿಗೂ ಶಿಕ್ಷಣ ನೀಡಬೇಕು ಎಂಬುದು ಅವರ ಮಹಾದಾಸೆಯಾಗಿತ್ತು ಎಂದು ಹೇಳಿದ್ದಾರೆ.

SCROLL FOR NEXT