ಕೋವಿಡ್ ಪರಿಸ್ಥಿತಿ ನಿಭಾಯಿಸುವಲ್ಲಿ ಕೇಂದ್ರ, ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಡಿ.ಕೆ. ಶಿವಕುಮಾರ್
ಕೋವಿಡ್ ಪರಿಸ್ಥಿತಿ ನಿಭಾಯಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.
ಬೆಂಗಳೂರು: ಕೋವಿಡ್ ಪರಿಸ್ಥಿತಿ ನಿಭಾಯಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷವಾಗಿ ಕಾಂಗ್ರೆಸ್ ಎಲ್ಲಾ ಸಹಕಾರ ನೀಡಿದ ಬಳಿಕವೂ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಅವರು ಹೇಳಿದ್ದಾರೆ.
ಏಪ್ರಿಲ್ 18 ರಂದು ಸಂಜೆ 4 ಗಂಟೆಗೆ ನಡೆಯುವ ಸರ್ವ ಸಭೆಯಲ್ಲಿ ಪಾಲ್ಗೊಳ್ಳುವಂತೆ ತಮ್ಮಗೆ ಅಧಿಕೃತ ಆಹ್ವಾನ ಬಂದಿದೆ. ಸಭೆಯಲ್ಲಿ ಪಾಲ್ಗೊಳ್ಳುವ ಕುರಿತು ಪಕ್ಷದ ಮುಖಂಡರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.
ರಾಜ್ಯ ಬಿಜೆಪಿ ಸರ್ಕಾರ ಉಪ ಚುನಾವಣೆ, ಮದುವೆ ಸಭೆ, ಸಮಾರಂಭ ನಡೆಯಲು ಬಿಟ್ಟು ಈಗ ಸರ್ವ ಪಕ್ಷ ಸಭೆ ಕರೆದರೆ ಏನು ಪ್ರಯೋಜನ ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.