ಲಕ್ಷ್ಮೀ ಹೆಬ್ಬಾಳಕರ್ 
ರಾಜ್ಯ

ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ ಅವರ ಮನೆಯ 8 ಮಂದಿಗೆ ಕೊರೋನಾ ಪಾಸಿಟಿವ್

ಬೆಳಗಾವಿ ಲೋಕಸಭೆ ಉಪ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಅವರ ಮನೆಯ 8 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಬೆಳಗಾವಿ: ಬೆಳಗಾವಿ ಲೋಕಸಭೆ ಉಪ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಅವರ ಮನೆಯ 8 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಜ್ವರ, ಕೆಮ್ಮು ಹಿನ್ನೆಲೆಯಲ್ಲಿ ಹೆಬ್ಬಾಳ್ಕರ್ ಅವರು ಕೊರೋನಾ ಪರೀಕ್ಷೆಗೆ ಒಳಗಾಗಿದ್ದರು. ಇಂದು ಕೋವಿಡ್ ಪರೀಕ್ಷೆಯ ವರದಿ ಬಂದಿದ್ದು, ಹೆಬ್ಬಾಳ್ಕರ್ ಜೊತೆ ಕುಟುಂಬದ 8 ಜನ ಸದಸ್ಯರಿಗೆ ಸೋಂಕು ದೃಢಪಟ್ಟಿದೆ.

ಹೆಬ್ಬಾಳ್ಕರ್ ಅವರ ಕಾರು ಚಾಲಕ, ಅಡಿಗೆ ಸಿಬ್ಬಂದಿಗೂ ಕೊರೋನಾ ಪಾಸಿಟಿವ್ ಬಂದಿದ್ದು, ಶಾಸಕಿ ಸೇರಿದಂತೆ 8 ಮಂದಿ ಹೋಮ್ ಕ್ವಾರಂಟೈನ್ ಆಗಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಳೆದ 15 ದಿನಗಳಿಂದ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪರ ಅಬ್ಬರದ ಪ್ರಚಾರ ಮಾಡಿದ್ದರು. ಈ ವೇಳೆ ಹಲವು ಕಾಂಗ್ರೆಸ್ ನಾಯಕರು ಸೇರಿದಂತೆ ಸಾಕಷ್ಟು ಜನರು ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!