ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾಗೆ 78 ಬಲಿ, ಬೆಂಗಳೂರಿನಲ್ಲಿ 9917 ಸೇರಿ 14,859 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಅಬ್ಬರ ಮುಂದುವರೆದಿದ್ದು, ಶುಕ್ರವಾರ ಬರೋಬ್ಬರಿ 14,859 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 11,24,509ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಮುಂದುವರೆದಿದ್ದು, ಶುಕ್ರವಾರ ಬರೋಬ್ಬರಿ 14,859 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 11,24,509ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 78 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 13,190ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 9917 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 5,22,438ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 57 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 4031 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 10,03,985ಕ್ಕೆ ಏರಿಕೆಯಾಗಿದೆ. ಇನ್ನು 1,07315 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 577 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ