ರಾಜ್ಯ

ನಕಲಿ ನೋಂದಣಿ: ಸಿಬಿಐಗೆ ಹೈಕೋರ್ಟ್ ನೋಟಿಸ್

Manjula VN

ಬೆಂಗಳೂರು: ಬೆಂಗಳೂರಿನ ಕೆಂಗೇರಿ ಸಬ್ ರಿಜಿಸ್ಟ್ರಾರ್ ಕಚೇರಿಗಳ ನಕಲಿ ಸೀಲ್ ಮತ್ತು ಫ್ರಾಂಕಿಂಗ್ ಯಂತ್ರಗಳನ್ನು ಬಳಸಿಕೊಂಡು ನಕಲಿ ನೋಂದಣಿ ದಾಖಲೆಗಳನ್ನು ಸೃಷ್ಟಿ ಮಾಡಿರುವ ಪ್ರಕರಣವನ್ನು ಸಿಬಿಐ ತನಿಖೆಗೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾದ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಮತ್ತು ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. 

ಈ ಕುರಿತು ತ್ಯಾಗರಾಜ ನಗರ ನಿವಾಸಿ ಎಸ್.ನಾರಾಯಣ ಎಂಬುವವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ, ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು. 

ಅರ್ಜಿ ಕುರಿತು ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ಸ್ಟ್ಯಾಂಪ್ ನೋಂದಣಿ ಇಲಾಖೆಯ ಮಹಾನಿರ್ದೇಶಕರು, ನಗರ ಪೊಲೀಸ್ ಆಯುಕ್ತರು, ಹಲಸೂರು ಗೇಟ್ ಠಾಣಾ ಪೊಲೀಸ್ ಇನ್ಸ್'ಪೆಕ್ಟರ್ ಮತ್ತು ಸಿಬಿಐ ಅಧೀಕ್ಷಕರಿಗೆ ನೋಟಿಸ್ ಜಾರಿ ಮಾಡಿತು. 

SCROLL FOR NEXT