ರಾಜ್ಯ

ಸಿಎಂ ಬಿಎಸ್‌ವೈ ಸೂಚನೆ ಹಿನ್ನಲೆಯಲ್ಲಿ ಏ.19ರಂದು ಬಿಬಿಎಂಪಿ ವ್ಯಾಪ್ತಿಯ ಜನಪ್ರತಿನಿಧಿಗಳ ಸಭೆ

Vishwanath S

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೋನಾ ಎರಡನೇ ಅಲೆ ವೇಗವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರುನಗರ ವ್ಯಾಪ್ತಿಯ ಶಾಸಕರು, ಸಂಸದರು, ಸಚಿವರುಗಳ ಸಭೆ ಕರೆದು ಚರ್ಚಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಕಂದಾಯ ಸಚಿವ ಆರ್. ಅಶೋಕ್ ಅಧ್ಯಕ್ಷತೆಯಲ್ಲಿ ನಗರದ ಎಲ್ಲ ಜನಪ್ರತಿನಿಧಿಗಳ ಸಭೆ ಕರೆಯುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮವಾರ ಏಪ್ರಿಲ್ 19ರಂದು ವಿಧಾನಸೌಧದ ಮೂರನೆ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಕಚೇರಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ. 

ಅಂದು ಮುಖ್ಯಮಂತ್ರಿ ಯಡಿಯೂರಪ್ಪ ವಿಡಿಯೋ ಕಾನ್ಪರೆನ್ಸ್  ಮೂಲಕ ಈ ಸಭೆಗೆ ಹಾಜರಾಗುವ ಸಾಧ್ಯತೆ ಇದೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ.

ಅಧಿಕಾರಿಗಳಿಗೆ ಎಚ್ಚರದಿಂದಿರುವಂತೆ ಮುಖ್ಯ ಕಾರ್ಯದರ್ಶಿ ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಇಲಾಖಾ ಕಾರ್ಯ ಚಟುವಟಿಕೆಗಳನ್ನು ನಡೆಸುವಂತೆ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಸೂಚನೆ ನೀಡಿದ್ದಾಾರೆ. 

ಮುಂದಿನ ಎರಡು ತಿಂಗಳು ತಮ್ಮ ಇಲಾಖೆಯ ಸಭೆಗಳನ್ನು ಸಾಧ್ಯವಾದಷ್ಟು ನಿಯಂತ್ರಿಸುವುದು. ಅನಿವಾರ್ಯವಾಗಿದ್ದರೆ ಸಭೆಯಲ್ಲಿ ಪಾಲ್ಗೊಳ್ಳುವ ಅಧಿಕಾರಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಸಭೆ ನಡೆಸುವುದು. ಇಲ್ಲವೇ ವಿಡಿಯೋ ಸಂವಾದ, ಅಥವಾ ವರ್ಚ್ಯುವಲ್ ಸಭೆಗಳನ್ನು ನಡೆಸುವಂತೆ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಸೂಚನೆ ನೀಡಿದ್ದಾರೆ.

SCROLL FOR NEXT