ರಾಜ್ಯ

ಉಪಚುನಾವಣೆ ಸಮರ: ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಸಿಎಂ ಯಡಿಯೂರಪ್ಪ ಮನವಿ

Manjula VN

ಬೆಂಗಳೂರು: ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಮನವಿ ಮಾಡಿಕೊಂಡಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಆತ್ಮೀಯ ಮತದಾರ ಬಂಧುಗಳೇ, ಇಂದು ತಪ್ಪದೇ ಮತ ಚಲಾಯಿಸಿ. ಪ್ರಜಾಪ್ರಭುತ್ವದ ಆಧಾರವೇ ಮತದಾನ, ಅದು ನಮ್ಮ ಹಕ್ಕೂ ಹೌದು, ಕರ್ತವ್ಯವೂ ಹೌದು. ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವ ಮೂಲಕ ನಿಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡಿ, ಪ್ರಜಾತಂತ್ರವನ್ನು ಬಲಪಡಿಸಿ ಎಂದು ಹೇಳಿದ್ದಾರೆ. 

ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ಕೂಡ ಟ್ವೀಟ್ ಮಾಡಿ, ದೇಶದ ವಿವಿಧ ಭಾಗಗಳಲ್ಲಿ ಇಂದು ಉಪಚುನಾವಣೆ ನಡೆಯುತ್ತಿದೆ. ಚುನಾವಣೆ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ ಪ್ರಜಾಪ್ರಭುತ್ವದ ಹಬ್ಬವನ್ನು ಮತ್ತಷ್ಟು ಬಲಪಡಿಸಬೇಕು ಎಂದು ಮನವಿ ಮಾಡಿದ್ದಾರೆ. 

SCROLL FOR NEXT