ರಾಜ್ಯ

ಕೋವಿಡ್ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲೂ ಉಚಿತ ಚಿಕಿತ್ಸೆ ನೀಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

Manjula VN

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳು ಸಂಪೂರ್ಣವಾಗಿ ಭರ್ತಿಯಾಗಿರುವುದರಿಂದ ಜನರು ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡುತ್ತಿದ್ದಾರೆ. ಸಾಕಷ್ಟು ಜನರಿಗೆ ಖಾಸಗಿ ಆಸ್ಪತ್ರೆಗಳ ವೆಚ್ಚವನ್ನು ಭರಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಖಾಸಗಿ ಆಸ್ಪತ್ರೆಗಳಲ್ಲೂ ಉಚಿತ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನು ಸರ್ಕಾರ ನೀಡಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಆಗ್ರಹಿಸಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಸರ್ಕಾರಿ ಆಸ್ಪತ್ರೆಗಳು ಸಂಪೂರ್ಣವಾಗಿ ಭರ್ತಿಯಾಗಿರುವುದರಿಂದ ಜನರು ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡುತ್ತಿದ್ದಾರೆ. ಸಾಕಷ್ಟು ಜನರಿಗೆ ಖಾಸಗಿ ಆಸ್ಪತ್ರೆಗಳ ವೆಚ್ಚವನ್ನು ಭರಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಖಾಸಗಿ ಆಸ್ಪತ್ರೆಗಳಿಗೆ ರೆಫರ್ ಮಾಡಲಾದ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಹೇಳಿದ್ದಾರೆ. 

ಇದೇ ವೇಳೆ ರಾಜ್ಯ ಹಾಗೂ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಕೋವಿಡ್ 19 ಎರಡನೇ ಅಲೆಯ ಈ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರಗಳ ದುರ್ಬಲ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬಹಿರಂಗಗೊಂಡಿದೆ ಎಂದು ಅವರು ಟೀಕಿಸಿದ್ದಾರೆ.

ಬಿಜೆಪಿ ನಾಯಕರು ಕೇವಲ ಚುನಾವಣೆಯ ಬಗ್ಗೆ ಮಾತ್ರ ತಲೆಕೆಡಿಸಿಕೊಳ್ಳುತ್ತಿದ್ದು, ಆಡಳಿತದ ಬಗ್ಗೆ ಗಮನ ಹರಿಸದೇ ಇರುವುದು ನಿಜಕ್ಕೂ ದುರದೃಷ್ಟಕರ ವಿಚಾರ. ಬಿಜೆಪಿ ನಾಯಕರು ಸಾರ್ವಜನಿಕರಿಗೆ ಬೋಧಿಸಲು ಪ್ರಯತ್ನಿಸುತ್ತಿರುವ ಶಿಷ್ಟಾಚಾರಗಳನ್ನು ತಾವೇಕೆ ಅನುಸರಿಸುತ್ತಿಲ್ಲ? ಎಂದು ಪ್ರಶ್ನಿಸಿದ್ದಾರೆ.

SCROLL FOR NEXT