ವಿ.ಸೋಮಣ್ಣ 
ರಾಜ್ಯ

ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಬೆಂಗಳೂರು ಸಚಿವರ ತುರ್ತು ಸಭೆ, ಸಮಾಲೋಚನೆ

ರಾಜ್ಯದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ 8 ಸಚಿವರು ತಮ್ಮ ತಮ್ಮ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ತುರ್ತು  ಸಭೆ ನಡೆಸಿ ಸಮಾಲೋಚನೆ ನಡೆಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ 8 ಸಚಿವರು ತಮ್ಮ ತಮ್ಮ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ತುರ್ತು  ಸಭೆ ನಡೆಸಿ ಸಮಾಲೋಚನೆ ನಡೆಸಿದ್ದಾರೆ.

ಡಿಸಿಎಂ ಅಶ್ವತ್ಥನಾರಾಯಣ, ಆರ್.ಅಶೋಕ, ಸುರೇಶ್ ಕುಮಾರ್, ವಿ.ಸೋಮಣ್ಣ, ಎಸ್ ಟಿ ಸೋಮಶೇಖರ್, ಭೈರತಿ ಬಸವರಾಜ್, ಕೆ,ಗೋಪಾಲಯ್ಯ ಮತ್ತು ಅರವಿಂದ ಲಿಂಬಾವಳಿ ಇವರಲ್ಲಿ ಕೆಲವರನ್ನು ಉಪ ಚುನಾವಣೆ ಉಸ್ತುವಾರಿಗಾಗಿ ನೇಮಿಸಲಾಗಿತ್ತು, ಉಪ ಚುನಾವಣೆ ಪ್ರಚಾರ ಮುಗಿದ ಹಿನ್ನೆಲೆಯಲ್ಲಿ ಕೋವಿಡ್  ನಿಯಂತ್ರಣದ ಕಡೆಗೆ ಗಮನ ಹರಿಸಿರುವ ಸಚಿವರು ಮ್ಯಾರಾಥಾನ್ ಸಭೆ ನಡೆಸಿ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಿದೆ.

ಶುಕ್ರವಾರ ವಸತಿ ಸತಿವ ವಿ.ಸೋಮಣ್ಣ  ಪೂರ್ವ ವಲಯ ಮತ್ತು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೋವಿಡ್‌ ಪರಿಹಾರ ಕ್ರಮಗಳ ಕುರಿತು ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

‘ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಪರೀಕ್ಷಾ ಸಂಖ್ಯೆಯನ್ನೂ ಹೆಚ್ಚು ಮಾಡಬೇಕಾಗಿದೆ. ಜ್ವರ ತಪಾಸಣಾ ಕೇಂದ್ರಗಳನ್ನು ಹೆಚ್ಚಿಸಲು ಕ್ರಮ ವಹಿಸಲಾಗುತ್ತಿದೆ. ಪ್ರತಿ ವಾರ್ಡ್‌ನಲ್ಲಿ ಎರಡು ಅಥವಾ ಎರಡಕ್ಕಿಂತ ಹೆಚ್ಚು ಜ್ವರ ತಪಾಸಣಾ ಕೇಂದ್ರ ಪ್ರಾರಂಭಿಸಲಾಗುವುದು’ ಎಂದು ಅವರು ಹೇಳಿದರು.

ನಗರದಲ್ಲಿ ಸ್ಯಾನಿಟೈಸ್‌ ಮಾಡುತ್ತಿದ್ದ ಮಾದರಿಯಲ್ಲೇ ಮತ್ತೆ ಸೋಂಕು ಮುಕ್ತ ದ್ರಾವಣ ಸಿಂಪಡಿಸುವ ಕೆಲಸ ಪ್ರಾರಂಭಿಸಲಾಗುವುದು. ಈ ಸಂಬಂಧ ಜಲಮಂಡಳಿ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳೊಂದಿಗೆ ಮಾತನಾಡಿ ಶನಿವಾರದಿಂದಲೇ ನಗರದಲ್ಲಿ ಸ್ಯಾನಿಟೈಸ್‌ ಕಾರ್ಯ ಪ್ರಾರಂಭಿಸಲಾಗುವುದು’ ಎಂದರು.

ಕೊರೊನಾ ಸೋಂಕು ದೃಢಪಟ್ಟವರು ಹಾಗೂ ತುರ್ತು ಚಿಕಿತ್ಸೆಯ ಅವಶ್ಯಕತೆ ಇರುವವರಿಗೆ ರೋಗಿ ಸಂಖ್ಯೆ (ಬಿಯು–ಬೆಂಗಳೂರು ಅರ್ಬನ್‌) ನೀಡಲಾಗುತ್ತದೆ. ಆದರೆ, ಈ ಸಂಖ್ಯೆಗಾಗಿ ಕಾಯುವ ಅವಶ್ಯಕತೆ ಇಲ್ಲ.

ಆಸ್ಪತ್ರೆಗಳೂ ಸಹ ತುರ್ತು ಚಿಕಿತ್ಸೆ ಅವಶ್ಯಕತೆ ಇರುವವರಿಗೆ ಬಿಯು ಸಂಖ್ಯೆ ಇಲ್ಲದೆ ಇದರೂ, ಕೂಡಲೇ ಸ್ಪಂದಿಸಬೇಕು. ಈ ಸಂಬಂಧ ಆಯುಕ್ತರು ನಿರ್ದೇಶನ ನೀಡಲಿದ್ದಾರೆ ಎಂದು ಹೇಳಿದರು. 3 ಲಕ್ಷ ಲಸಿಕೆ: ‘ನಗರಕ್ಕೆೆ ಅಗತ್ಯವಿರುವಷ್ಟು ಕೋವಿಡ್ ಲಸಿಕೆ ನೀಡುವಂತೆ ಮನವಿ ಮಾಡಲಾಗಿದೆ. ರಾಜ್ಯಕ್ಕೆೆ 10 ಲಕ್ಷ ಕೋವಿಡ್ ಲಸಿಕೆ ಬರಲಿದ್ದು, ಇದರಲ್ಲಿ 3 ಲಕ್ಷ
ಕೋವಿಡ್ ಲಸಿಕೆ ನಗರಕ್ಕೆ ನೀಡುವಂತೆ ಮನವಿ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.

ಇನ್ನೂ ಅಬಕಾರಿ ಸಚಿವ ಕೆ. ಗೋಪಾಲಯ್ಯ ಕೂಡ ತಮ್ಮ ಕಚೇರಿಯಿಂದಲೇ ಝೂಮ್ ಸಂವಾದ ನಡೆಸಿ ಬಿಬಿಎಂಪಿ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು.  

ಇನ್ನೂ ಶಿಕ್ಷಣ ಸಚಿವ ಸುರೇಶ್ ಕುಮಾರ್ ರಾಜಾಜಿನಗರದಲ್ಲಿ ಬಿಬಿಎಂಪಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ತಮ್ಮ ಕ್ಷೇತ್ರದಲ್ಲಿ ಸ್ವಯಂ ಸೇವಕರ ತಂಡ ರಚಿಸಿ ಪ್ರತಿ ವಾರ್ಡ್ ನಲ್ಲಿ ಕೆಲಸ ಮಾಡಲು ತೀರ್ಮಾನಿಸಿದ್ದಾರೆ.

ಡಿಸಿಎಂ ಅಶ್ವತ್ಥ ನಾರಾಯಣ ಮಲ್ಲೇಶ್ವರಂನಲ್ಲಿ ಅಧಿಕಾರಿಗಳ ಜೊತೆ ಪರಿಶೀಲನಾ ಸಭೆ ನಡೆಸಿದರು.  ಇನ್ನೂ ಕೊರೋನಾ ಸೋಂಕಿತ ರೋಗಿಗಳು ಮತ್ತು ಅವರ ಕುಟುಂಬಸ್ಥರ ಜೊತೆ ಚರ್ಚಿಸಿ ಅವರಿಗೆ ಜಾಗೃತಿ ಮೂಡಿಸಲು ತರಬೇತಿ ಪಡೆದ ನರ್ಸ್ ಗಳನ್ನು ಕಳುಹಿಸಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

SCROLL FOR NEXT