ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿಗೂ ಕೊರೋನಾ ಸೋಂಕು
ಇದೀಗ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿಯವರಿಗೂ ಕೊರೋನಾ ಸೋಂಕು ತಗುಲಿದೆ.
ಬೆಂಗಳೂರು: ಇದೀಗ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಯವರಿಗೂ ಕೊರೋನಾ ಸೋಂಕು ತಗುಲಿದೆ.
ತಮಗೆ ಕೊರೋನಾ ಸೋಂಕು ಬಂದಿದೆ ಎಂದು ಟ್ವೀಟ್ ಮೂಲಕ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಮೊನ್ನೆ ಅವರು ಬಸವಕಲ್ಯಾಣ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪರವಾಗಿ ಮೊನ್ನೆ ಪ್ರಚಾರ ನಡೆಸಿದ್ದರು. ನಂತರ ಜ್ವರ, ಶೀತ ಕಂಡುಬಂದ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡಾಗ ಸೋಂಕು ಪತ್ತೆಯಾಗಿದೆ. ಇತ್ತೀಚೆಗೆ ತಮ್ಮ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಸದ್ಯ ಕುಮಾರಸ್ವಾಮಿಯವರು ಹೋಂ ಕ್ವಾರಂಟೈನ್ ನಲ್ಲಿದ್ದಾರೆ.
ನಿನ್ನೆಯಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಎರಡನೇ ಬಾರಿ ಕೊರೋನಾ ಸೋಂಕು ಕಾಣಿಸಿಕೊಂಡು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೆಲ ದಿನಗಳ ಹಿಂದೆ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರಿಗೂ ಸೋಂಕು ತಗುಲಿ ಆಸ್ಪತ್ರೆಯಲ್ಲಿ ದಾಖಲಾಗಿ ಗುಣಮುಖರಾಗಿ ಬಂದಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.