ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾಗೆ 81 ಬಲಿ, ಬೆಂಗಳೂರಿನಲ್ಲಿ 12793 ಸೇರಿ 19067 ಮಂದಿಗೆ ಪಾಸಿಟಿವ್ 

Nagaraja AB

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಮುಂದುವರೆದಿದ್ದು, ಭಾನುವಾರ ಬರೋಬ್ಬರಿ 19067 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 11,61,065ಕ್ಕೆ  ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 81 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 13,351ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 12793  ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 546635 ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 60 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 4603 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 10,14152ಕ್ಕೆ ಏರಿಕೆಯಾಗಿದೆ. ಇನ್ನು 133543 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 620 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

SCROLL FOR NEXT