ರಾಜ್ಯ

ಕರ್ನಾಟಕದಲ್ಲಿ ಆಸ್ಪತ್ರೆಗಳಲ್ಲಿ ಕೋವಿಡ್-19 ರೋಗಿಗಳಿಗೆ ಬೆಡ್ ಕೊರತೆಯಿದೆಯೇ: ಸರ್ಕಾರ ಏನು ಹೇಳುತ್ತದೆ?

Sumana Upadhyaya

ಬೆಂಗಳೂರು: ಕರ್ನಾಟಕದಲ್ಲಿ ಐಸಿಯು ಬೆಡ್ ಗಳ ಮತ್ತು ವೆಂಟಿಲೇಟರ್ ಸೌಲಭ್ಯವಿರುವ ಬೆಡ್ ಗಳಿಗೆ ಆಸ್ಪತ್ರೆಗಳಲ್ಲಿ ತೀವ್ರ ಕೊರತೆಯುಂಟಾಗಿದೆ. ಈ ಸಂದರ್ಭದಲ್ಲಿ ಕೋವಿಡ್ ಸೋಂಕಿತರು ಹೆಚ್ಚಾಗುತ್ತಿರುವಾಗ ಬೆಂಗಳೂರಿನಲ್ಲಿ ಆಸ್ಪತ್ರೆಗಳ ಬೆಡ್ ಸೌಲಭ್ಯ ಈ ರೀತಿ ಇದು ಎಂದು ಮಾಹಿತಿಯನ್ನು ಸರ್ಕಾರ ನೀಡಿದೆ.

ಕರ್ನಾಟಕ ಆರೋಗ್ಯ ಇಲಾಖೆ ಆಯುಕ್ತ ತ್ರಿಲೋಕ್ ಚಂದ್ರ, ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್ ಗಳಿಗೆ ಸಮಸ್ಯೆಯಿಲ್ಲ ಎನ್ನುತ್ತಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆ ಸೌಲಭ್ಯಗಳ ದತ್ತಾಂಶವನ್ನು ಇತರ ಜಿಲ್ಲೆಗಳಿಂದ ಸಂಗ್ರಹಿಸಲಾಗುತ್ತಿದೆ, ಮುಂದಿನ ದಿನಗಳಲ್ಲಿ ಯಾವುದೇ ಅವಶ್ಯಕತೆಗಳನ್ನು ಪೂರೈಸಲು ಬೆಂಗಳೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಶೇಕಡಾ 50 ರಷ್ಟು ಹಾಸಿಗೆಗಳನ್ನು ಕಾಯ್ದಿರಿಸಲು ಸರ್ಕಾರ ನಿರ್ದೇಶನ ನೀಡಿದೆ.

ಕೊರೋನಾ ಸೋಂಕಿನ ಸಣ್ಣ ಮತ್ತು ಮಧ್ಯಮ ಪ್ರಮಾಣದ ಲಕ್ಷಣ ಇದ್ದರೆ ಮತ್ತು ಲಕ್ಷಣಗಳಿಲ್ಲದೆ ಕೊರೋನಾ ಸೋಂಕಿತರಾಗಿದ್ದರೆ ಆಸ್ಪತ್ರೆಗಳಿಗೆ ಹೋಗಿ ದಾಖಲಾಗುವ ಅಗತ್ಯವಿಲ್ಲ, ಮನೆಯಲ್ಲಿಯೇ ಕ್ವಾರಂಟೈನ್ ಆಗಿ ಎಂದು ಬೆಂಗಳೂರು ನಾಗರಿಕರಿಗೆ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಹೇಳಿದ್ದಾರೆ.

SCROLL FOR NEXT