ರಾಜ್ಯ

ಒಂದೇ ದಿನ 2.59 ಲಕ್ಷ ಡೋಸ್ ಕೋವಿಡ್-19 ಲಸಿಕೆ ವಿತರಣೆ; ದಾಖಲೆ ಬರೆದ ಕರ್ನಾಟಕ

Srinivasamurthy VN

ಬೆಂಗಳೂರು: ಕೋವಿಡ್-19 ಲಸಿಕೆ ವಿತರಣೆಯಲ್ಲಿ ಕರ್ನಾಟಕ ದಾಖಲೆ ನಿರ್ಮಾಣ ಮಾಡಿದ್ದು, ಕಳೆದ 24 ಗಂಟೆಗಳಲ್ಲಿ 2.59 ಲಕ್ಷ ಡೋಸ್ ಲಸಿಕೆ ವಿತರಣೆ ಮಾಡಲಾಗಿದೆ.

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿರುವಂತೆಯೇ ಇತ್ತ ಜನರು ಕೂಡ ಲಸಿಕೆ ಹಾಕಿಸಿಕೊಳ್ಳಲು ಮುಂದಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಕರ್ನಾಟಕದಾದ್ಯಂತ ದಾಖಲೆಯ 2.59 ಲಕ್ಷ ಡೋಸ್ ಲಸಿಕೆ ವಿತರಣೆ ಮಾಡಲಾಗಿದೆ.

ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, 'ಶನಿವಾರ ರಾತ್ರಿ 11 ಗಂಟೆ ವರೆಗೆ, ರಾಜ್ಯದಲ್ಲಿ ಒಂದೇ ದಿನ 2,59,439 ಲಕ್ಷ ಡೋಸ್ ಕೊರೊನಾ ಲಸಿಕೆ ವಿತರಣೆ ಮಾಡಿದ್ದು ಇಡೀ ದೇಶದಲ್ಲೇ ಮೊದಲ ಸ್ಥಾನ ಪಡೆದಿದೆ ಎಂದು ಹೇಳಿದ್ದಾರೆ.

ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ರಾಜ್ಯ ಆರೋಗ್ಯ ಇಲಾಖೆ ಕೂಡ ರಾಜ್ಯದಲ್ಲಿ ನಿನ್ನೆ 2,59,439 ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದ್ದು, ಇದೇ ದೇಶದಲ್ಲಿ ಗರಿಷ್ಟ ಸಂಖ್ಯೆಯಾಗಿದೆ. ಆ ಮೂಲಕ ಕರ್ನಾಟಕ ಅಗ್ರ ಸ್ಥಾನಕ್ಕೇರಿದ್ದು, 2ನೇ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ ನಿನ್ನೆ 2,35,690 ಲಕ್ಷ ಡೋಸ್  ಲಸಿಕೆ ನೀಡಲಾಗಿದೆ. ಮೂರನೇ ಸ್ಥಾನದಲ್ಲಿ ಮಧ್ಯ ಪ್ರದೇಶವಿದ್ದು, ಇಲ್ಲಿ 1,78,389 ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ ಎಂದು ಟ್ವೀಟ್ ಮಾಡಿದೆ.

SCROLL FOR NEXT