ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೆ ಅಲೆಯ ಅರ್ಬಟ ನಿಯಂತ್ರಣ ಕುರಿತಂತೆ ನಾಳೆ ಸರ್ವಪಕ್ಷಗಳ ಸಭೆ ಕರೆಯಲಾಗಿದೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಕೊರೋನಾ ಸೋಂಕು ತಗುಲಿದ್ದರೂ ವೀಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಯಲಿದೆ.
ನಾಳೆ ಸಂಜೆ 4.30ಕ್ಕೆ ರಾಜ್ಯಪಾಲರ ಅಧ್ಯಕ್ಷತೆಯಲ್ಲಿಸಭೆ ನಡೆಯಲಿದೆ. ಸಭೆಯಲ್ಲಿ ಎಲ್ಲಾ ಪಕ್ಷಗಳ ನಾಯಕರು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಲಿದ್ದಾರೆ.
ಇನ್ನು ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಕಠಿಣ ಕ್ರಮಗಳ ಜಾರಿ ಸಂಬಂಧ ಮುಖ್ಯಮಂತ್ರಿಗಳು ಎಲ್ಲಾ ಪಕ್ಷಗಳ ನಾಯಕರೊಡನೆ ಚರ್ಚೆ ನಡೆಸಲಿದ್ದಾರೆ. ಸಭೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೇರಿ ಹಲವರು ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.