ರಾಜ್ಯ

'ಬೆಂಗಳೂರು ಕರಗ ಉತ್ಸವ ಮೆರವಣಿಗೆ' ಈ ವರ್ಷ ಕೂಡ ರದ್ದು: 350 ವರ್ಷಗಳ ಇತಿಹಾಸದಲ್ಲಿ ಇದು ಎರಡನೇ ಬಾರಿ!

Sumana Upadhyaya

ಬೆಂಗಳೂರು: ಬೆಂಗಳೂರು ನಗರದಲ್ಲಿ ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಹೀಗಾಗಿ ಸದ್ಯ ಈಗ ನೈಟ್ ಕರ್ಫ್ಯೂ ಜಾರಿಯಲ್ಲಿದೆ. ಸರ್ಕಾರದ ಆದೇಶದನ್ವಯ ಧಾರ್ಮಿಕ ಆಚರಣೆಗಳನ್ನು ಕೇವಲ ಸಾಂಪ್ರದಾಯಿಕವಾಗಿ ಆಚರಿಸಲು ಆದೇಶ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ ದ್ರೌಪದಿ ಕರಗ ಉತ್ಸವ ಮೆರವಣಿಗೆಯನ್ನು ಈ ವರ್ಷ ಕೂಡ ರದ್ದುಪಡಿಸಲಾಗಿದೆ. ನಗರದ ತಿಗಳರಪೇಟೆಯಲ್ಲಿರುವ ಧರ್ಮರಾಯಸ್ವಾಮಿ ದೇವಾಲಯದ ದ್ರೌಪದಿ ಕರಗ ಶಕ್ತ್ಯೋತ್ಸವ ಆಚರಣೆಯ ಮೆರವಣಿಗೆಯನ್ನು ಸರ್ಕಾರ ರದ್ದುಪಡಿಸಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

350 ವರ್ಷಗಳ ಇತಿಹಾಸವನ್ನು ಹೊಂದಿರುವ ಕರಗ ಉತ್ಸವ ಮೆರವಣಿಗೆ ರದ್ದಾಗುತ್ತಿರುವುದು ಇದು ಎರಡನೇ ಬಾರಿ, ಕಳೆದ ವರ್ಷ ಕೂಡ ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ರದ್ದಾಗಿತ್ತು.

SCROLL FOR NEXT