ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ: ಮಹಾಮಾರಿಗೆ ಒಂದೇ ದಿನ 146 ಬಲಿ, 15,785 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಸೋಮವಾರ ಒಂದೇ ದಿನ ಬರೋಬ್ಬರಿ 146 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 13497ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಸೋಮವಾರ ಒಂದೇ ದಿನ ಬರೋಬ್ಬರಿ 146 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 13497ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 15,785 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 11,76,850ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 9618 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 5,56,253ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 97 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 7098 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 10,21,250ಕ್ಕೆ ಏರಿಕೆಯಾಗಿದೆ. ಇನ್ನು 1,42,084 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 721 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್‌ ದಾಳಿ; ಭಾರತೀಯ ಸೇರಿ ನಾಲ್ವರಿಗೆ ಗಾಯ

IPL 2026: ವಿರಾಟ್ ಕೊಹ್ಲಿ ನೆಟ್​​ನಲ್ಲಿ ಕಠಿಣ ಅಭ್ಯಾಸ! Video ವೈರಲ್

ರಾಜ್ಯದಲ್ಲಿ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟನೆ

ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು: ಗಾಜಿಯಾಬಾದ್‌ನ ಹರೀಶ್ ರಾಣಾ ದಯಾಮರಣಕ್ಕೆ ಅನುಮತಿ! ಏನಿದು ಪ್ರಕರಣ?

'ಜಸ್ಪ್ರೀತ್ ಬುಮ್ರಾ ನನ್ನಿಂದ ನಿಧಾನಗತಿಯ ಬೌಲಿಂಗ್ ಕಲಿತರು': ಚರ್ಚೆಗೆ ಗ್ರಾಸವಾದ ಪಾಕ್ ಮೂಲದ ವೇಗಿಯ ಹೇಳಿಕೆ!

SCROLL FOR NEXT