ರಾಜ್ಯ

ದಾವಣಗೆರೆ: ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯಗೆ ಕೊರೋನಾ ಸೋಂಕು

Shilpa D

ದಾವಣಗೆರೆ: ಮಾಜಿ ಸಚಿವ, ಹೊನ್ನಾಳಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ. 

ಈ ಹಿನ್ನೆಲೆಯಲ್ಲಿ ಅವರೀಗ ಮನೆಯಲ್ಲೇ ಐಸೊಲೇಷನ್​ ಆಗಿದ್ದು, ತನ್ನ ಜೊತೆಗಿದ್ದವರೂ ಸಹ ಕೊರೋನಾ ಪರೀಕ್ಷೆ ಮಾಡಿಕೊಳ್ಳಿ, ಮುಂಜಾಗ್ರತೆ ವಹಿಸಿ ಎಂದು ವಿನಂತಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಎಂ.ಪಿ. ರೇಣುಕಾಚಾರ್ಯ, ನನಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಐಸೋಲೇಶನ್ ಗೆ ಒಳಗಾಗಿದ್ದೇನೆ. ಇತ್ತೀಚೆಗೆ ನನ್ನ ಜೊತೆ ಸಂಪರ್ಕದಲ್ಲಿದ್ದ ಎಲ್ಲರೂ ಆದಷ್ಟು ಬೇಗ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ ಎಂದಿದ್ದಾರೆ.

SCROLL FOR NEXT