ಬೀದರ್ ಮಾಜಿ ಶಾಸಕ ಸಯ್ಯದ್ ಜುಲ್ಫೀಕರ್ ಹಾಸ್ಮಿ ಇನ್ನಿಲ್ಲ
ಬೀದರ್ ಮಾಜಿ ಶಾಸಕ ಸಯ್ಯದ್ ಜುಲ್ಫೀಕರ್ ಹಾಸ್ಮಿ (57) ಮಂಗಳವಾರ ನಿಧನರಾಗಿದ್ದಾರೆ.
ಬೀದರ್: ಬೀದರ್ ಮಾಜಿ ಶಾಸಕ ಸಯ್ಯದ್ ಜುಲ್ಫೀಕರ್ ಹಾಸ್ಮಿ (57) ಮಂಗಳವಾರ ನಿಧನರಾಗಿದ್ದಾರೆ.
ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ಹಾಸ್ಮಿ ಕಳೆದ 4 ತಿಂಗಳಿಂದ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು.
ಮೃತರು ಪತ್ನಿ, ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ
ಹಾಸ್ಮಿ 1994ರಲ್ಲಿ ಬಿಎಸ್‌ಪಿ ಶಾಸಕರಾಗಿ ಬೀದರ್ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. ದಕ್ಷಿಣ ಭಾರತದಲ್ಲಿ ಬಿಎಸ್‌ಪಿ ಖಾತೆ ತೆರೆದ ಮೊದಲ ವ್ಯಕ್ತಿ ಎನ್ನುವ ಶ್ರೇಯಸ್ಸಿ ಇವರು ಪಾತ್ರವಾಗಿದ್ದರು. ನಂತರದ ದಿನಗಳಲ್ಲಿ ಅವರು ಜೆಡಿಎಸ್, ಕಾಂಗ್ರೆಸ್ ಪಕ್ಷಗಳಲ್ಲಿ ಸಹ ಗುರುತಿಸಿಕೊಂಡಿದ್ದರು.
ಅಲ್ಲದೆ ಅಪ್ಪಟ ಅಂಬೇಡ್ಕರ್ ವಾದಿಯಾಗಿದ್ದ ಹಾಸ್ಮಿ ಬಿಎಂಪಿ ರಾಜ್ಯ ಅಧ್ಯಕ್ಷರಾಗಿ ಸಹ ಸೇವೆ ಸಲ್ಲಿಸಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.