ಸಾಂದರ್ಭಿಕ ಚಿತ್ರ 
ರಾಜ್ಯ

ರಸಗೊಬ್ಬರ ದರ ಏರಿಕೆ: ರಾಜ್ಯಾದ್ಯಂತ ರೈತ ಸಂಘ ಪ್ರತಿಭಟನೆ

ರಸಾಯನಿಕ ಗೊಬ್ಬರಗಳ ಬೆಲೆ ಏರಿಕೆ ತಡೆದು ನಿಯಂತ್ರಣಕ್ಕೊಳಪಡಿಸುವ ಅಗತ್ಯ ಕ್ರಮಗಳಿಗಾಗಿ ಒತ್ತಾಯಿಸಿ, ರಾಜ್ಯವ್ಯಾಪಿ ಪ್ರತಿಭಟನೆಗೆ ಕರ್ನಾಟಕ ರಾಜ್ಯ ರೈತ ಸಂಘ ಕರೆ ನೀಡಿದೆ.

ಮೈಸೂರು: ರಸಾಯನಿಕ ಗೊಬ್ಬರಗಳ ಬೆಲೆ ಏರಿಕೆ ತಡೆದು ನಿಯಂತ್ರಣಕ್ಕೊಳಪಡಿಸುವ ಅಗತ್ಯ ಕ್ರಮಗಳಿಗಾಗಿ ಒತ್ತಾಯಿಸಿ, ರಾಜ್ಯವ್ಯಾಪಿ ಪ್ರತಿಭಟನೆಗೆ ಕರ್ನಾಟಕ ರಾಜ್ಯ ರೈತ ಸಂಘ ಕರೆ ನೀಡಿದೆ.

ಭಾರತೀಯ ರೈತ ರಸಗೊಬ್ಬರ ಸಹಕಾರಿ ಲಿಮಿಟೆಡ್ (ಇಫ್ಕೊ) ಸೇರಿದಂತೆ ದೇಶದ ಪ್ರಮುಖ ರಸಗೊಬ್ಬರ ತಯಾರಕರು ಇತ್ತೀಚೆಗೆ ಸಾಮಾನ್ಯವಾಗಿ ಬಳಸುವ ರಸಗೊಬ್ಬರಗಳ ಮೇಲೆ ಶೇಕಡಾ 45-58ಕ್ಕಿಂತ ಹೆಚ್ಚಿನ ಹೆಚ್ಚಳವನ್ನು ಘೋಷಿಸಿದ್ದು, ಈ ಕ್ರಮ ರೈತರಿಗೆ ನೋವುಂಟು ಮಾಡಿದೆ.

ಸರ್ಕಾರವು ರೈತರ ಬಗೆಗಿನ ಕಾಳಜಿಯನ್ನು ಕಳೆದುಕೊಂಡಿರುವಂತೆ ತೋರುತ್ತದೆ. ರಸಗೊಬ್ಬರಗಳ ಬೆಲೆಯನ್ನು ಹೆಚ್ಚಿಸುವ ನಿರ್ಧಾರವನ್ನು ಸರ್ಕಾರ ಹಿಂತೆಗೆದುಕೊಳ್ಳಬೇಕು ಎಂದು ಕೆಆರ್‌ಆರ್‌ಎಸ್ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ. 

ಸಂಸದರ ಮನೆ ಮತ್ತು ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಿ ರೈತರು ರೈತರು ತಮ್ಮ ಬೇಡಿಕೆಗಳನ್ನು ಮುಂದಿಡಲಿದ್ದಾರೆ ಎಂದು ಅವರು ಹೇಳಿದರು. ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿಯೂ ಪ್ರತಿಭಟನೆ ನಡೆಯಲಿದೆ, ಆದರೆ ಕೋವಿಡ್ ಪ್ರೋಟೋಕಾಲ್‌ಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಿದ್ದೇವೆ ಎಂದು ಹೇಳಿದ್ದಾರೆ.

ಕೊರೊನಾವೈರಸ್ ಪ್ರಕರಣಗಳು ಹೆಚ್ಚುತ್ತಿದ್ದು ಸಾರ್ವಜನಿಕರ ಚಳುವಳಿಯ ಮೇಲಿನ ನಿರ್ಬಂಧಗಳ ಹೆಚ್ಚುತ್ತಿವೆ, ಹಾಗಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂಜಿಎನ್‌ಆರ್‌ಇಜಿ ಎಸ್) ಅಡಿಯಲ್ಲಿ ವಾರ್ಷಿಕ ಕೆಲಸದ ಸಮಯವನ್ನು 200 ಗಂಟೆಗಳವರೆಗೆ ಹೆಚ್ಚಿಸುವಂತೆ ನಾಗೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಕೊರೋನಾ ಸಾಂಕ್ರಾಮಿಕ ಮತ್ತು ಲಾಕ್ ಡೌನ್ ನಂತರ ಗ್ರಾಮೀಣ ಪ್ರದೇಶಗಳಲ್ಲಿ ಸಿಲುಕಿರುವ ಅನೇಕರಿಗೆ ಈ ಯೋಜನೆ ಸಹಾಯ ಮಾಡಲಿದೆ ಎಂದು ಅವರು ತಿಳಿಸಿದ್ದಾರೆ. ಚುನಾವಣಾ ರ್ಯಾಲಿಗಳಲ್ಲಿ ಕೊರೋನಾ ನೀತಿ ನಿಯಮಗಳನ್ನು ಉಲ್ಲಂಘಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಯಡಿಯೂರಪ್ಪ ಅವರ ವಿರುದ್ಧ ಸುಮೊಟು ಕೇಸ್ ದಾಖಲಿಸಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT